Friday, November 20, 2026

ಪ್ರಾಯೋಗಿಕ ಆವೃತ್ತಿ

ಬಾಲಕಿಯರ ಅತ್ಯಾಚಾರ ಮತ್ತು ಕೊಲೆ : ನಾಲ್ವರ ಬಂಧನ


  • ಲಖಿಂಪುರ ಖೇರಿ ಜಿಲ್ಲೆ ನಿಘನಸ್ ಪ್ರದೇಶದಲ್ಲಿ ಮರದಲ್ಲಿ ನೇಣು

  • ನಾಲ್ವರು ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಎಫ್.ಐ.ಆರ್.

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ನಿಘನಸ್ ಎಂಬ ಪ್ರದೇಶದಲ್ಲಿ ಇಬ್ಬರು ಅಪ್ರಾಪ್ತ ದಲಿತ ಸಹೋದರಿಯರ ಶವಗಳು ಸೆಪ್ಟೆಂಬರ್ 14 ರಂದು ಅವರ ಮನೆಯ ಹತ್ತಿರದಲ್ಲೇ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದಿದೆ.

ದುಷ್ಕರ್ಮಿಗಳು ನನ್ನ ಮಕ್ಕಳನ್ನು ಬೈಕ್ ಗಳಲ್ಲಿ ಅಪಹರಿಸಿ ಅತ್ಯಾಚಾರ ಮಾಡಿ ಕೊಂದು ನಂತರ ನಮ್ಮ ಮನೆಯಿಂದ ಒಂದು ಕಿಲೋಮೀಟರ್ ದೂರವಿರುವ ಕಬ್ಬಿನ ಗದ್ದೆಯಲ್ಲಿ ಅವರನ್ನು ನೇಣುಹಾಕಿದ್ದಾರೆ ಎಂದು ಮೃತ ಬಾಲಕಿಯರ ತಾಯಿ ದೂರಿದ್ದು, ಈಗಾಗಲೇ ನಾಲ್ವರು ಆರೋಪಿಗಳ ವಿರುದ್ಧ ಅಪ್ರಾಪ್ತ ಬಾಲಕಿಯರನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಕ್ಕೆ ಪೋಕ್ಸೋ ಕಾಯ್ದೆ ಅಡಿಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿರುವ ಲಖಿಂಪುರ ಖೇರಿ ಪೋಲೀಸ್ ವರಿಷ್ಠಾದಿಕಾರಿ ಸಂಜೀವಿ ಸುಮನ್ ಈಗಾಗಲೇ ಆರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ವೈದ್ಯರ ಸಮಿತಿಯಿಂದ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ ಎಂದು ತಿಳಿಸಿದರು.

ಅತ್ಯಾಚಾರಕ್ಕೆ ಒಳಗಾಗಿ ಹತ್ಯೆಗೀಡಾಗಿರುವ ಅಪ್ರಾಪ್ತ ಸಹೋದರಿಯರ ಶವಗಳನ್ನು ಇಂದು ಅಂತ್ಯಕ್ರಿಯೆಗಾಗಿ ಅವರ ಸ್ವಗ್ರಾಮಕ್ಕೆ ತರಲಾಗಿದೆ.

ಈ ಆಹಿತಕರ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾಧವ್ , ಕಾಂಗ್ರೇಶ್ ನಾಯಕಿ ಪ್ರಿಯಾಂಕ ಗಾಂಧಿ ಖಂಡಿಸಿದ್ದಾರೆ

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ