ರಾಜ್ಯದಲ್ಲಿ ವಿಧಾನಸಭೆ ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ ತಮಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗುರುವಾರ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಮತ್ತು ಅಸೆಂಬ್ಲಿ ಅಧಿವೇಶನದ ಮಧ್ಯೆ, ಅವರು(ಇಡಿ) ಮತ್ತೆ ನನಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ” ಎಂದು ಶಿವಕುಮಾರ್ ಟ್ವಿಟರ್ನಲ್ಲಿ ಹೇಳಿಕೊಂಡಿದ್ದಾರೆ.
#BharatJodoYatra ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ.
ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ, ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ.— DK Shivakumar (@DKShivakumar) September 15, 2022
“ನಾನು ಇಡಿಗೆ ಸಹಕರಿಸಲು ಸಿದ್ಧನಿದ್ದೇನೆ, ಆದರೆ , ಈ ಸಮಯದಲ್ಲಿ ನನಗೆ ಸಮನ್ಸ್ ನೀಡಿರುವುದು, ನನಗೆ ಕಿರುಕುಳ ನೀಡುವ ಉದ್ದೇಶದಿಂದಲೇ ಕೂಡಿದೆ, ಈ ಕ್ರಮವು ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ಅಡ್ಡಿ ಮಾಡುತ್ತಿದೆ ಎಂದು ಅವರು ಹೇಳಿದರು.
ಕೆಲವು ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ಪಕ್ಷವು, ಭಾರತೀಯ ಜನತಾ ಪಕ್ಷದ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ “ಶೇ. 40 ಸರ್ಕಾರ, ಬಿಜೆಪಿ ಎಂದರೆ ಭ್ರಷ್ಟಾಚಾರ” ಎಂಬ ಬ್ಯಾನರ್ ಅಡಿಯಲ್ಲಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದನ್ನು ಗಮನಿಸಬಹುದು.




