Sunday, November 22, 2026

ಪ್ರಾಯೋಗಿಕ ಆವೃತ್ತಿ

ಅಭಿವೃದ್ದಿಗೆ ಶಿಕ್ಷಣವೇ ಮೂಲಮಂತ್ರ-ರಾಮಚಂದ್ರು

ದೇಶದ ಅಭಿವೃದ್ದಿಗೆ ಶಿಕ್ಷಣವೇ ಮೂಲಮಂತ್ರವಾಗಿದೆ ಎಂದು ಮನ್ ಮುಲ್ ಅಧ್ಯಕ್ಷ ಬಿ. ಆರ್. ರಾಮಚಂದ್ರು ಹೇಳಿದರು.

ಮಂಡ್ಯ ತಾಲ್ಲೂಕಿನ ಪಣಕನಹಳ್ಳಿ ಗ್ರಾಮದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಯುವಕರ ಸಂಘ ಆಯೋಜಿಸಿದ ಸರ್. ಎಂ. ವಿಶ್ವೇಶ್ವರಯ್ಯ ಜಯಂತೋತ್ಸವ ಹಾಗೂ ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಶಿಕ್ಷಣದ ಸುಜ್ಞಾನ ಪಡೆದ ನಾಲ್ವಡಿ ಕೃಷ್ಣರಾಜ ಒಡೆಯರ್, ಇಂಜಿನಿಯರ್ ಸರ್.ಎಂ.ವಿಶ್ವೇಶ್ವರಯ್ಯ ಅವರ ಕೊಡುಗೆ ಅಪಾರ, ಅವರನ್ನು ಎಲ್ಲರೂ ಸ್ಮರಿಸಿಕೊಳ್ಳುವ ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ನಿವೃತ್ತ ಪ್ರಾಧ್ಯಾಪಕರಾದ ಶಿವಪ್ರಸಾದ್ ಮತ್ತು ಚಂದ್ರಮ್ಮ ಅವರನ್ನು ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಕಾರ‍್ಯಕ್ರಮದಲ್ಲಿ ಪ್ರಾಧ್ಯಾಪಕ ಶ್ರೀಕಾಂತ್, ವಾಗೀಶ್  ಚಂದ್ರಗುರು,  ಪ್ರಾಧ್ಯಾಪಕ ಪ್ರೊ.ಎಚ್.ಪಿ.ನಾಗರಾಜು, ಹೊಳಲು ಗ್ರಾ.ಪಂ. ಅಧ್ಯಕ್ಷ ರವಿ, ಸದಸ್ಯರಾದ ಆನಂದ, ಡಿ.ಜೆ.ಲೋಕೇಶ್, ಪ್ರಶೀಲ ಪ್ರದೀಪ್, ನಂದಿನಿರಂಗಯ್ಯ.ಯುವಕರ ಸಂಘದ ಪದಾಧಿಕಾರಿಗಳಾದ ಅವಿನಾಶ್, ಪ್ರದೀಪ್, ಶಿವರಾಜ್, ಶಿವರಾಂ, ವಿನಯ್, ರಘು, ಚಂದ್ರು, ಜವರೇಗೌಡ, ಸುಚಿತ್ರ, ಹಾಗೂ ಉಮೇಶ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ