ಮನುಷ್ಯ ಮಾಡುವ ತಪ್ಪುಗಳಿಂದ ಪರಿಸರದ ಮೇಲೆ ಹಾಗೂ ಓಝೋನ್ ಮೇಲೆ ಆಗುವ ಪರಿಣಾಮಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿ, ಓಝೋನ್ ರಕ್ಷಣೆ ಮುಂದಾಗಬೇಕೆಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ಸಲಹೆ ನೀಡಿದರು.
ಮಂಡ್ಯ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಕಾವೇರಿ ಉದ್ಯಾನವನದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ, ಭೂಮಿ ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ವಿಶ್ವ ಓಝೋನ್ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸುತ್ತಮುತ್ತಲಿನ ಪ್ರದೇಶದಲ್ಲಿ ಗಿಡಗಳ ನೆಟ್ಟು ರಕ್ಷಣೆ ಮಾಡಿದರೆ ಇಂಗಾಲದ ಡೈ ಆಕ್ಸೈಡ್ ಪ್ರಮಾಣ ಕಡಿಮೆಯಾಗುತ್ತದೆ. ನಾವು ಭೂಮಿಯನ್ನು ವೈಜ್ಞಾನಿಕವಾಗಿ ಅರ್ಥ ಮಾಡಿಕೊಳ್ಳದೆ ಹೋದರೆ ವಿನಾಶಕ್ಕೆ ನಾವೇ ಕಾರಣರಾಗುತ್ತೇವೆ ಎಂದರು.
ಕಾರ್ಯಕ್ರಮದಲ್ಲಿ ಪರಿಸರ ಅಧಿಕಾರಿ ಬಿ.ಪಿ.ಗೀತಾ, ಉಪ ಪರಿಸರ ಅಧಿಕಾರಿ ಭವ್ಯ, ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿ ಅಧ್ಯಕ್ಷ ಯೋಗೇಶ್ ಮಂಗಲ, ಅಶ್ವಿನಿ, ವೆಂಕಟೇಶ್ ಹಾಗೂ ರಾಜಣ್ಣ ಉಪಸ್ಥಿತರಿದ್ದರು.




