Thursday, September 19, 2024

ಪ್ರಾಯೋಗಿಕ ಆವೃತ್ತಿ

10 ಕೋಟಿ ರೂ. ವೆಚ್ಚದಲ್ಲಿ ಸ್ಟೇಡಿಯಂ ಅಭಿವೃದ್ಧಿ

ಮಂಡ್ಯನಗರದ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣವನ್ನು 10 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಹಾಗೂ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಸಂಸದೆ ಸುಮಲತಾ ಅಂಬರೀಶ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಓ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಕ್ರೀಡಾ ಇಲಾಖೆಯ ಆಯುಕ್ತ ಗೋಪಾಲ ಕೃಷ್ಣ, ಸಹಾಯಕ ನಿರ್ದೇಶಕ ಓಂ ಪ್ರಕಾಶ್, ನಗರ ಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!