Monday, November 23, 2026

ಪ್ರಾಯೋಗಿಕ ಆವೃತ್ತಿ

ಸೆ.30ರೊಳಗೆ ಮೈಷುಗರ್ ಪೂರ್ಣ ಕಾರ್ಯಾರಂಭ : ಗೋಪಾಲಯ್ಯ


ಸೆ.19 ರಿಂದ 2 ನೇ ಬಾಯ್ಲರ್ ಕಾರ್ಯ ಶುರು

ನಿಗದಿತ ಅವಧಿಯೊಳಗೆ ಹಣ ಪಾವತಿಸಲು ಕ್ರಮ


ಮೈಷುಗರ್ ಸಕ್ಕರೆ ಕಾರ್ಖಾನೆ ಸೆಪ್ಟೆಂಬರ್ 30 ರೊಳಗಾಗಿ ಸಂಪೂರ್ಣವಾಗಿ ಚಾಲನೆಗೊಳ್ಳಲಿದೆ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ತಿಳಿಸಿದರು.

ಶನಿವಾರ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಖಾನೆಯ ಕೆಲಸ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು, ಕಾರ್ಖಾನೆಯ ಎರಡನೇ ಬಯ್ಲರ್ ನ  ಕಾರ್ಯ ಸೆ.19 ರಿಂದ
ಪ್ರಾರಂಭವಾಗಲಿದೆ ಎಂದರು.

ಮೈಷುಗರ್ ಕಾರ್ಯ ವ್ಯಾಪ್ತಿಗೆ ಬರುವ ಕಬ್ಬನ್ನು ಬೇರೆ ಕಾರ್ಖಾನೆಯವರು ಕಟಾವು ಮಾಡದಂತೆ ಈಗಾಗಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿದೆ. ಮೈಷುಗರ್ ಕಾರ್ಖಾನೆ ವ್ಯಾಪ್ತಿಯ ಕಬ್ಬು ಬೇರೆ ಕಡೆಗೆ ಸಾಗಾಣಿಕೆಯಾಗುತ್ತಿದ್ದಲ್ಲಿ ವಶ ಪಡಿಸಿಕೊಳ್ಳಲು ಕ್ರಮ ವಹಿಸಿ ಎಂದರು.

ರೈತರಲ್ಲಿ ವಿಶ್ವಾಸ ಮೂಡಿಸಿ, ರೈತರಿಂದ ಕಬ್ಬು ಖರೀದಿಸಿ, ನಿಗದಿತ ಅವಧಿಯೊಳಗೆ ಹಣ ಪಾವತಿ ಮಾಡಿ, ಇದರಿಂದ ರೈತರಲ್ಲಿ ಕಾರ್ಖಾನೆಯ ಬಗ್ಗೆ ವಿಶ್ವಾಸ ಹೆಚ್ಚಳವಾಗಿ, ಮೈಷುಗರ್ ವ್ಯಾಪ್ತಿಯ ಕಬ್ಬನ್ನು ಈ  ಕಾರ್ಖಾನೆಗೆ ನೀಡುತ್ತಾರೆ ಎಂದು ಹೇಳಿದರು.

ಸೆ.30ರ ನಂತರ ಮುಖ್ಯಮಂತ್ರಿ ಅವರನ್ನು ಮೈಷುಗರ್ ಕಾರ್ಖಾನೆಗೆ ಆಹ್ವಾನಿಸಿ, ಇಲ್ಲಿಯ ಎಲ್ಲಾ ಘಟಕಗಳ ಕಾರ್ಯನಿರ್ವಾಹಣೆಯನ್ನು  ಪರಿಚಯಿಸಲಾಗುವುದು. ಇದಕ್ಕೆ ಪೂರ್ವಭಾವಿಯಾಗಿ ಖುದ್ದು ಸೆ.30 ರೊಳಗಾಗಿ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ ಪರಿಶೀಲಿಸುತ್ತೇನೆ ಎಂದರು.

ಸಕ್ಕರೆ ಕಾರ್ಖಾನೆ ಪುನರರಾಂಭಗೊಂಡಿರುವುದರಿಂದ ಸಣ್ಣ ಪುಟ್ಟ ತೊಂದರೆಗಳು ಉಂಟಾಗಬಹುದು, ಅವುಗಳನ್ನು ಸರಿಪಡಿಸಿಕೊಂಡು ಪೂರ್ಣ ಪ್ರಮಾಣದಲ್ಲಿ ಚಾಲನೆಗೊಳ್ಳಬೇಕು  ಎಂದು ರೇಷ್ಮೇ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣ ಗೌಡ ತಿಳಿಸಿದರು.

ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ ಅವರು ಸಕ್ಕರೆ ಕಾರ್ಖಾನೆಯ ಕಾರ್ಯ ನಿರ್ವಹಣೆಯ ಬಗ್ಗೆ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳುವ ಕ್ರಮಗಳ ಬಗ್ಗೆ ಸಚಿವರಿಗೆ ವಿವರಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್ ರಾಯಪುರ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ.ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಶಾಂತಾ ಎಲ್.ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಉಪವಿಭಾಗಾಧಿಕಾರಿ ಆರ್.ಐಶ್ವರ್ಯ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ