ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ವಿತರಣೆ ಮಾಡಲಾಗುವುದು ಎಂದು ಗೊರವಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಿ.ಸಿ.ನವೀನ್‌ಕುಮಾರ್ ಹೇಳಿದರು.
ಮಂಡ್ಯ ತಾಲೂಕಿನ ಗೊರವಾಲೆಯಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೊರವಾಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು ಎಲ್ಲಾ ನಿರ್ದೇಶಕರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡುತ್ತಾ ಪ್ರಗತಿ ಸಾಧಿಸುತ್ತಿದೆ. ಪ್ರಸಕ್ತ ಸಾಲಿನಲ್ಲಿ 4.80 ಲಕ್ಷ ರೂ. ಲಾಭ ಪಡೆದು ಸಾಧನೆ ಮಾಡಿದೆ ಎಂದು ನುಡಿದರು.
ಮುಂದಿನ ದಿನಗಳಲ್ಲಿ ರೈತರು ಮತ್ತು ಸಾರ್ವಜನಿಕರ ಸಹಕಾರದಿಂದ ಮತ್ತಷ್ಟು ಅಭಿವೃದ್ಧಿ ಪಡಿಸಲು ಸಂಕಲ್ಪಮಾಡಿದ್ಧೇವೆ.ಇದಕ್ಕೆ ಎಲ್ಲರೂ ಸಹಕಾರ ನೀಡಿ ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷೆ ಎಸ್.ಕೆ.ಶಾಂತಮ್ಮ, ನಿರ್ದೇಶಕರಾದ ಜಿ.ಎಂ.ರವೀಂದ್ರ, ಜಿ.ಕೆ.ಪ್ರಸನ್ನ, ಸಂತೋಷ್, ಜಯಲಕ್ಷ್ಮಿ, ಅನ್ನಪೂರ್ಣಮ್ಮ, ಲೀಲಾವತಿ, ಬೊಮ್ಮೇಗೌಡ, ಸಿಇಓ ಜಯಕುಮಾರ್, ಸಿಬ್ಬಂದಿಗಳು ಹಾಜರಿದ್ದರು.




