Thursday, November 19, 2026

ಪ್ರಾಯೋಗಿಕ ಆವೃತ್ತಿ

ಸ್ಕೌಟ್ಸ್ ಮತ್ತು ಗೈಡ್ಸ್‌ ಸೇರಿ ಶಿಸ್ತು-ಸಂಯಮ ಕಲಿಯಿರಿ

ಸ್ಕೌಟ್ಸ್ ಮತ್ತು ಗೈಡ್ಸ್‌ ಸೇರಿ ವಿದ್ಯಾರ್ಥಿಗಳು ಶಿಸ್ತು, ಸಂಯಮ ಕಲಿಯಬಹುದು ಎಂದು ಡಯಟ್ ಉಪ ನಿರ್ದೇಶಕ ಎಂ.ಶಿವಮಾದಪ್ಪ ಹೇಳಿದರು.

ಮಂಡ್ಯ ನಗರದ ಡಯಟ್ ಸಭಾಂಗಣದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ಕಬ್ ಮಾಸ್ಟರ್, ಫ್ಲಾಕ್ ಲೀಡರ್, ಸ್ಕೌಟ್ ಮಾಸ್ಟರ್, ಗೈಡ್ ಕ್ಯಾಪ್ಟನ್ ಗಳ ಮೂಲ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕರು ಕೇವಲ ಶಾಲೆಯಲ್ಲಿ ಮಕ್ಕಳಿಗೆ ಪ್ರಶ್ನೆ ಉತ್ತರ ಹೇಳಿ‌ ಪಾಠ ಮಾಡಿ ಕೈ ತೊಳೆದುಕೊಳ್ಳುವುದು ಬೇಡ.ಇದರ ಜೊತೆಗೆ, ಎನ್‌ಸಿಸಿ ಹಾಗೂ ಎನ್‌ಎಸ್‌ಎಸ್‌ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ಇವು ದೇಶಪ್ರೇಮ, ಶಿಸ್ತು ಹಾಗೂ ಸಂಯಮ ಕಲಿಸುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ಅವರ ನಡತೆಯೇ ಸಂಪೂರ್ಣವಾಗಿ ಬದಲಾಗುತ್ತದೆ. ಮಕ್ಕಳ ವರ್ತನೆಗಳು ಬದಲಾಗುತ್ತವೆ. ಎಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿಯಬಹುದು. ಕೇವಲ ಮಾರ್ಕ್ಸ್ ಕಾರ್ಡ್ ಜಾಬ್ ಗೆ ಆಗುತ್ತೆ, ಆದರೆ ರಾಷ್ಟ್ರ ಪ್ರೇಮ ಬೆಳಸಿಕೊಳ್ಳುವುದು ಮೊದಲಾದ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಮುಖ್ಯ ಆಯುಕ್ತ ಟಿ.ವರಪ್ರಸಾದ್ ಮಾತನಾಡಿ, ಹೊಸ ಶಿಕ್ಷಣ ನೀತಿ ಜಾರಿಗೆ ಬಂದಿದೆ.ವಿದ್ಯಾರ್ಥಿಗಳು ಒಂದು ಚಟುವಟಿಕೆ ಆಯ್ಕೆ ಮಾಡಿಕೊಳ್ಳಬೇಕು. ಇದರನ್ವಯ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಸೇರಿದರೆ ಅನುಕೂಲವಾಗುತ್ತದೆ. ಶಿಕ್ಷಕರು ವಿಶೇಷವಾಗಿ ತರಬೇತಿ ಪಡೆದು ವಿದ್ಯಾರ್ಥಿಗಳಿಗೆ ನೆರವಾಗಿ ಎಂದು ಸಲಹೆ ನೀಡಿದರು.

ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯ ಸ್ಕೌಟ್ಸ್ ವಿಭಾಗದ ಜಿಲ್ಲಾ ಆಯುಕ್ತ ಭಕ್ತವತ್ಸಲ, ಜಿಲ್ಲಾ ಉಪಾಧ್ಯಕ್ಷ ಥಾಮಸ್, ಎಡಿಸಿಗಳಾದ ನಾಗರೇವಕ್ಕ, ಭವಾನಿ, ಸಂಘಟನಾ ಆಯುಕ್ತ ಕೃಷ್ಣಮೂರ್ತಿ, ಕಾರ್ಯದರ್ಶಿ ಶಿವರಾಮೇಗೌಡ,ಪದ್ಮ ಶ್ರೀನಿವಾಸ್, ಸಹಾಯಕರಾದ ರಾಮಕೃಷ್ಣ, ಮಂಜುಳಾ ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ