Saturday, November 21, 2026

ಪ್ರಾಯೋಗಿಕ ಆವೃತ್ತಿ

ಅ.12ರಂದು ಜಿಲ್ಲಾ ಒಕ್ಕಲಿಗರ ಸಂಘದ ಉದ್ಘಾಟನೆ

ಅ.12ರಂದು ಮಧ್ಯಾಹ್ನ 3 ಗಂಟೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘ  ಉದ್ಘಾಟನೆ ಮತ್ತು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಿಗೆ ಅಭಿನಂದನೆ ಹಾಗೂ ಕೇಪೇಗೌಡ ಜಯಂತೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ತಿಮ್ಮೇಗೌಡ ಗೌಡಯ್ಯನದೊಡ್ಡಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಗದ್ಗುರು ಶ್ರೀ ಡಾ.ನಿರ್ಮಲಾನಂದ ಸ್ವಾಮೀಜಿ, ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ಪ್ರಸನ್ನನಾಥಸ್ವಾಮೀಜಿ ಅವರು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಸಂಘದ ಉದ್ಘಾಟನೆ ನೆರವೇರಿಸುವರು ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,  ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಸನ್ಮಾನ್ಯ ಕೆ.ಸಿ. ನಾರಾಯಣಗೌಡ, ಸಂಸದೆ ಸುಮಲತಾ ಅಂಬರೀಶ್‌, ಜಿಲ್ಲೆಯ ಶಾಸಕರು, ವಿಧಾನಪರಿಷತ್‌ ಸದಸ್ಯರು, ನಗರಸಭಾ ಅಧ್ಯಕ್ಷರು ಮತ್ತು ಸದಸ್ಯರು, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಸೇರಿದಂತೆ ಸಂಘಸಂಸ್ಥೆಗಳ ಮುಖಂಡರು ಭಾಗವಹಿಸುವರು ಎಂದು ಹೇಳಿದರು.

ಗೋಷ್ಠಿಯಲ್ಲಿ ಮುಖಂಡರಾದ ದೇವರಾಜ್ ಪಟೇಲ್, ಜಗದೀಶ್ ಗೌಡ, ಗಂಜಾಂ ಸತ್ಯಮೂರ್ತಿ ಹಾಗೂ ಮಂಜು ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ