-
ಅಧಿಕಾರಿಗಳ ಕಡ್ಡಾಯ ಹಾಜರಾತಿಗೆ ಸೂಚನೆ
- ಜನಪ್ರತಿನಿಧಿಗಳ ಆಹ್ವಾನಿಸುವಲ್ಲಿ ಶಿಷ್ಠಾಚಾರ ಪಾಲಿಸಿ
ಮಂಡ್ಯ ನಗರದ ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ನಡೆದ ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದ ಉದ್ಯಾನವನದಲ್ಲಿ ಗಾಂಧೀಜಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ. ಶಾಲಾ ಮಕ್ಕಳಿಂದ ಗಾಂಧೀಜಿ ಅವರ ಕುರಿತು ಭಜನೆ, ಮಹಾತ್ಮಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಕಾರ್ಯಕ್ರಮಕ್ಕೆ ಹಿಂದೂ ,ಮುಸ್ಲಿಂ ,ಜೈನ ,ಕ್ರೈಸ್ತ ಹಾಗೂ ಇತರೆ ಧರ್ಮದ ಗುರುಗಳನ್ನು ಆಹ್ವಾನಿಸಿ ಸರ್ವಧರ್ಮ ಪ್ರಾರ್ಥನೆ ನಡೆಸಿ ಎಂದರು.
ಹಾಜರಾತಿ ಕಡ್ಡಾಯ
ಮಂಡ್ಯ ಜಿಲ್ಲೆಯಲ್ಲಿ ನಡೆಯುವ ಸರ್ಕಾರಿ ಕಾರ್ಯಕ್ರಮ, ಸಭೆ ಹಾಗೂ ಸಮಾರಂಭಗಳಿಗೆ ಸರ್ಕಾರ ನೀಡಿರುವ ನಿರ್ದೇಶನದಂತೆ ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳನ್ನು ಆಹ್ವಾನಿಸಿ ಶಿಷ್ಠಾಚಾರ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಡಾ: ಹೆಚ್.ಎಲ್ ನಾಗರಾಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಸೇರಿದಂತೆ ಇನ್ನಿತರ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆಗಳನ್ನು ಅಧಿಕಾರಿಗಳು ಜನಪ್ರತಿನಿಧಿಗಳಿಗೆ ತಲುಪಿಸುವ ಕೆಲಸ ಮಾಡಬೇಕು ಎಂದರು.
ಶಿಷ್ಠಾಚಾರ ಪಾಲನೆ ಕುರಿತಂತೆ ಸರ್ಕಾರ ಕಾಲ ಕಾಲಕ್ಕೆ ಹೊರಡಿಸುವ ಸುತ್ತೋಲೆಗಳನ್ನು ಪಾಲಿಸಿ, ಸಚಿವರು ಹಾಗೂ ಶಾಸಕರಿಗೆ ಖುದ್ದು ಸಂಪರ್ಕಿಸಿ ಆಹ್ವಾನ ಪತ್ರಿಕೆಗಳನ್ನು ತಲುಪಿಸಿ, ಸಾಧ್ಯವಾಗದಿದ್ದಲ್ಲಿ ಕರೆ ಮಾಡಿ ಅವರಿಗೆ ಕಾರ್ಯಕ್ರಮದ ಮಾಹಿತಿ ನೀಡಿ ಆಹ್ವಾನಿಸಿ, ಶಿಷ್ಠಾಚಾರ ಉಲ್ಲಂಘನೆಯಾಗದಂತೆ ನೋಡಿಕೊಳ್ಳಿ ಎಂದರು.




