Monday, May 20, 2024

ಪ್ರಾಯೋಗಿಕ ಆವೃತ್ತಿ

ವಿಜಯಪುರ ಕೊಳವೆಬಾವಿ ದುರಂತ| ಸತತ 18 ಗಂಟೆಗಳ ಕಾರ್ಯಾಚರಣೆ ನಂತರ 2 ವರ್ಷದ ಬಾಲಕನ ರಕ್ಷಣೆ

ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಬುಧವಾರ ಕೊಳವೆ ಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು 18 ಗಂಟೆಗಳ ನಿರಂತರ ಕಾರ್ಯಾಚರಣೆಯ ನಂತರ ರಕ್ಷಿಸಲಾಗಿದೆ.

ಎರಡು ವರ್ಷದ ಸಾತ್ವಿಕ್ ಮುಜಗೊಂಡ ಎಂಬ ಮಗು, ತೆರೆದ ಕೊಳವೆ ಬಾವಿಗೆ ಬಿದ್ದಿತ್ತು. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಏಪ್ರಿಲ್ 3ರಂದು ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಲಚಯ್ಯನ ಹಳ್ಳಿಯಲ್ಲಿ 16 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿತ್ತು.

ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದರು. ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದರು. 2 ಬೃಹತ್ ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸಲಾಗಿತ್ತು.

“>

ಸತತ 18 ಗಂಟೆ ಕಾರ್ಯಾಚರಣೆ

ಸತತ 18 ಗಂಟೆ ಕಾರ್ಯಾಚರಣೆಯ ನಂತರ ಮಗುವನ್ನು ರಕ್ಷಣೆ ಮಾಡಲಾಗಿದೆ. ಕಳೆದ 18 ಗಂಟೆಗಳಿಂದ ಮಗು ಅನ್ನ ನೀರು ಇಲ್ಲದೆ 16 ಅಡಿ ಆಳದಲ್ಲಿ ನರಳಾಡುತ್ತಿತ್ತು. ಮಗುವಿನ ಚಲನವಲನಗಳನ್ನು ಕ್ಯಾಮಾರದಲ್ಲಿ ರಕ್ಷಣಾ ಕಾರ್ಯಾಚರಣೆಯ ತಂಡ ಗಮನಿಸುತ್ತಿತ್ತು. ಮಗು ಕಾಲು ಅಲ್ಲಾಡಿಸುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು.

ಪೊಲೀಸರ ಪ್ರಕಾರ, “ಮಗು ತನ್ನ ಮನೆಯ ಬಳಿ ಆಟವಾಡಲು ಹೋದಾಗ ಬೋರ್‌ವೆಲ್‌ಗೆ ಬಿದ್ದಿದೆ. ಹುಡುಗನು ತಲೆ ಕೆಳಗಾಗಿ ಬಿದ್ದಿದ್ದಾನೆ. ಮಗುವಿನ ಅಳು ಕೇಳಿದ ಯಾರೋ ಕೂಡಲೇ ಮನೆಯವರಿಗೆ ಮಾಹಿತಿ ನೀಡಿದ್ದಾರೆ. ಆಗ ವಿಷಯ ಬೆಳಕಿಗೆ ಬಂದಿದೆ” ಎಂದಿದ್ದಾರೆ.

ಬಾಲಕನನ್ನು ರಕ್ಷಿಸಲು ಅಧಿಕಾರಿಗಳು ಅಗೆಯುವ ಯಂತ್ರವನ್ನು ಬಳಸಿ ಬೋರ್‌ವೆಲ್‌ಗೆ ಸಮಾನಾಂತರವಾಗಿ ಸುಮಾರು 21 ಅಡಿ ಆಳದ ಹೊಂಡವನ್ನು ಅಗೆದಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಅಧಿಕಾರಿಗಳು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ ಕೂಡ ಸ್ಥಳದಲ್ಲಿದ್ದಾರೆ. ಸ್ಥಳದಲ್ಲಿ ಜಮಾಯಿಸಿದ ಜನರನ್ನು ತಡೆಯಲು ಬಿಗಿ ಪೊಲೀಸ್ ಬಂದೋಬಸ್ತ್ ಕೂಡ ಮಾಡಲಾಗಿದೆ.

ಮಗು ಹೇಗಿದೆ ಎಂಬುದು ಇನ್ನೂ ತಿಳಿದುಬಂದಿಲ್ಲ. ಆಮ್ಲಜನಕದೊಂದಿಗೆ ವೈದ್ಯಕೀಯ ತಂಡ ಸ್ಥಳದಲ್ಲಿ ಬೀಡುಬಿಟ್ಟಿದೆ ಮತ್ತು ಚುಚ್ಚುಮದ್ದು ಸೇರಿದಂತೆ ತುರ್ತು ಪ್ರಥಮ ಚಿಕಿತ್ಸಾ ಔಷಧಿಗಳನ್ನು ಸಿದ್ಧಪಡಿಸಲಾಗಿದೆ. ಮಗುವನ್ನು ರಕ್ಷಿಸಿದ ತಕ್ಷಣ ಇಂಡಿಯಲ್ಲಿರುವ ಆಸ್ಪತ್ರೆಗೆ ಸ್ಥಳಾಂತರಿಸಲು ಆಂಬ್ಯುಲೆನ್ಸ್ ಅನ್ನು ಸಹ ಇರಿಸಲಾಗಿದೆ.

ಬೋರ್‌ವೆಲ್ ಕೊರೆಸಿದ್ದ ಅಜ್ಜ

ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್​ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು ಎಂದು ಹೇಳಲಾಗಿದೆ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ.

ರಾಜ್ಯದಲ್ಲಿ 8 ಕೊಳವೆಬಾವಿ ದುರಂತ

ರಾಜ್ಯದಲ್ಲಿ ಒಟ್ಟು 8 ಕೊಳವೆಬಾವಿ ದುರಂತಗಳು ನಡೆದಿದೆ. 2000ನೇ ಇಸವಿಯಿಂದ ಇಲ್ಲಿಯವರೆಗೆ ರಾಜ್ಯದಲ್ಲಿ ರಾಯಚೂರು, ವಿಜಯಪುರ, ಬಾಗಲಕೋಟೆ ದಾವಣಗೆರೆ, ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 8 ಪ್ರಕರಣಗಳು ನಡೆದಿದೆ. ಆದರೆ, ಬದುಕಿ ಬಂದಿದ್ದು ಮಾತ್ರ ಕೇವಲ ಒಂದು ಘಟನೆ.

2000ರಲ್ಲಿ ಕೊಳವೆ ಬಾವಿಗೆ ಬಿದ್ದು ದಾವಣಗೆರೆಯಲ್ಲಿ ಬಾಲಕ ಕರಿಯ ಸಾವು, 2007ರಲ್ಲಿ ರಾಯಚೂರಿನಲ್ಲಿ ಬಾಲಕ ಸಂದೀಪ್ ಸಾವು, 2014ರಲ್ಲಿ ಬಾಗಲಕೋಟೆಯಲ್ಲಿ 6 ವರ್ಷದ ಬಾಲಕ ತಿಮ್ಮಣ್ಣ ಹಾಗೂ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಬಾಲಕಿ ಅಕ್ಷತಾ ಸಾವು, 2017ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ವರ್ಷದ ಬಾಲಕಿ ಕಾವೇರಿ ಹಾಗೂ ಗದಗ ಜಿಲ್ಲೆಯ ಸವಡಿ ಗ್ರಾಮದ ಇಬ್ಬರು ಯುವಕರು ಸಾವನ್ನಪ್ಪಿದ್ದರು.

ಈ ಹಿಂದೆ ಇದೇ ರೀತಿ ವಿಜಯಪುರ ಜಿಲ್ಲೆಯಲ್ಲಿ 2 ಬೋರ್‌ವೇಲ್ ದುರಂತ ಪ್ರಕರಣಗಳು ವರದಿಯಾಗಿತ್ತು. 2008 ಮತ್ತು 2014ರಲ್ಲಿಕೊಳವೆ ಬಾವಿ ದುರಂತಗಳು ಸಂಭವಿಸಿದ್ದವು. 2008 ರಲ್ಲಿ ಚಡಚಣ ತಾಲೂಕಿನ ದೇವರನಿಂಬರಗಿ ಗ್ರಾಮದಲ್ಲಿ ಕಾಂಚನಾ ಉರ್ಪ್ ಏಗವ್ವ ಎನ್ನುವ ಬಾಲಕಿ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಜೆಸಿಬಿಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿತ್ತು. ಆದರೆ ಮಗು ಮೃತಪಟ್ಟಿತ್ತು.

ಆ ಬಳಿಕ ಇಂಥದ್ದೇ ಘಟನೆ 2014ರಲ್ಲಿ ವಿಜಯಪುರ ತಾಲೂಕಿನ ದ್ಯಾಬೇರಿ ಗ್ರಾಮದಲ್ಲಿ ನಡೆದಿತ್ತು. ಆಟವಾಡುವ ವೇಳೆ 3 ವರ್ಷದ ಬಾಲಕಿ ಅಕ್ಷತಾ ಹನುಮಂತ ಪಾಟೀಲ್ ತೆರೆದ ಕೊಳವೆ ಬಾವಿಗೆ ಬಿದ್ದಿದ್ದಳು. ಅಕ್ಷತಾ ರಕ್ಷಣಾ ಕಾರ್ಯಾಚರಣೆ ನಡೆದರೂ ಫಲ ಸಿಕ್ಕಿರಲಿಲ್ಲ. ಜೆಸಿಬಿಗಳ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಅಕ್ಷತಾ ಬದುಕಿ ಬರಲಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!