Friday, November 20, 2026

ಪ್ರಾಯೋಗಿಕ ಆವೃತ್ತಿ

ಅ.2ರಂದು ಬೃಹತ್ ರಕ್ತದಾನ ಶಿಬಿರ

75ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಅಂಗವಾಗಿ ಮದ್ದೂರು ಪಟ್ಟಣದ ಶಿವಪುರದ ಧ್ವಜಸತ್ಯಾಗ್ರಹ ಸೌಧದ ಆವರಣದಲ್ಲಿ ಅ.2 ರಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದು  ಸಿರಿ ಆದರ್ಶ ಚಿಟ್ಸ್ ಫಂಡ್ ನ ವ್ಯವಸ್ಥಾಪಕ ಆದರ್ಶ ಮನವಿ ಮಾಡಿದರು.

ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು ಅವರು,ಮದ್ದೂರು ತಾಲ್ಲೂಕಿನ ಸಂಘ ಸಂಸ್ಥೆಗಳ ಒಕ್ಕೂಟ ಮತ್ತು ಮಂಡ್ಯ ಮಿಮ್ಸ್ ರಕ್ತನಿಧಿ ಕೇಂದ್ರದ ವತಿಯಿಂದ ನಡೆಯುವ ಶಿಬಿರದಲ್ಲಿ ಯುವಕರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡಬೇಕೆಂದರು.

ರಕ್ತದಾನ ಶ್ರೇಷ್ಠದಾನವಾಗಿದೆ, ಪ್ರಸ್ತುತದಲ್ಲಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಪ್ರಮಾಣದ ರಕ್ತದ ಅವಶ್ಯಕತೆ ಇದೆ. ಅಪಘಾತಕ್ಕೀಡಾದವರು, ಗರ್ಭಿಣಿ, ಬಾಣಂತಿಯರು ಹಾಗೂ ಹಲವು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ರಕ್ತ ಅವಶ್ಯಕತೆ ಇರುವುದರಿಂದ ಪ್ರತಿಯೊಬ್ಬ ಯುವಕರು ರಕ್ತದಾನ ಮಾಡಬೇಕು. ರಕ್ತದಾನ ಮಾಡುವುದು ಆದ್ಯ ಕರ್ತವ್ಯ ಎಂದು ಯುವಕರು ಭಾವಿಸಬೇಕು. ರಕ್ತದಾನ ಮಾಡುವುದರಿಂದ ಯಾವುದೇ ಅಡ್ಡ ಪರಿಣಾಮಗಳು ಉಂಟಾಗುವುದಿಲ್ಲ ಎಂದರು.

ರಕ್ತದಾನ ಮಾಡುವುದರಿಂದ ಇನ್ನಷ್ಟು ಆರೋಗ್ಯ ವೃದ್ಧಿಸುತ್ತದೆ, ಮತ್ತೊಬ್ಬರ ಜೀವಕ್ಕೆ ಆಸರೆಯಾಗಬಹುದು, ಯುವಕರು ನಾಗರಿಕರು ಸಂಘ ಸಂಸ್ಥೆಗಳ ಮುಖಂಡರು ಸ್ವಯಂ ಪ್ರೇರಿತವಾಗಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಿ ಅತಿ ಹೆಚ್ಚಿನ ಪ್ರಮಾಣದ ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಜಯಂತ್, ತೊರೆಚಾಕನಹಳ್ಳಿ ಶಂಕರೇಗೌಡ, ತೈಲೂರು ಸಿದ್ಧರಾಜು, ರಘು ವೆಂಕಟೇಗೌಡ, ಕುಂದನಕುಪ್ಪೆ ಕುಮಾರ್, ತೈಲೂರು ಗಿರೀಶ್, ಲಿಂಗೇಗೌಡ, ಶ್ರೀಕ ಶ್ರೀನಿವಾಸ್, ಮೌಲಾನಾ ಅಬ್ದುಲ್ ಕರೀಂ, ಅಯೂಬ್ ಖಾನ್, ಮಹಮ್ಮದ್ ರಿಯಾಜ್, ಕಲೀಂ ಪಾಷಾ ಸೇರಿದಂತೆ ಇತರರು ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ