Friday, September 20, 2024

ಪ್ರಾಯೋಗಿಕ ಆವೃತ್ತಿ

ವಕೀಲನ ಮೇಲೆ ಹಲ್ಲೆ ಪ್ರಕರಣ| ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು ಪೊಲೀಸರು ವಕೀಲ ಪ್ರೀತಮ್ ಅವರ ಮೇಲೆ ಹಲ್ಲೆ ಮಾಡಿರುವುದನ್ನು ವಿರೋಧಿಸಿ ಹಾಗೂ ಕೂಡಲೇ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮಳವಳ್ಳಿ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಸೋಮವಾರ ಪ್ರತಿಭಟನೆ ನಡೆಸಿದರು.

ವಕೀಲರು ಮಳವಳ್ಳಿ ಪಟ್ಟಣದ ಕೋರ್ಟ್ ಆವರಣದಿಂದ ಹೊರಟು ತಾಲೂಕು ಕಚೇರಿಯವರೆಗೂ
ಅಲ್ಲಿನ ಪೊಲೀಸರ ವರ್ತನೆ ಖಂಡಿಸಿ, ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಳವಳ್ಳಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಸುಂದರ್ ಮಾತನಾಡಿ, ಪೊಲೀಸ್ ಇಲಾಖೆಯವರು ವಕೀಲರ ಜೊತೆ ಈ ರೀತಿ ನೆಡದುಕೊಂಡರೆ, ಇನ್ನೂ ಸಾಮಾನ್ಯ ಜನರನ್ನು ಹೇಗೆ ನಡೆಸಿಕೊಳ್ಳುತ್ತಾರೆ ಎಂಬ ಪ್ರಶ್ನೆ ವಕೀಲ ಸಮುದಾಯದಲ್ಲಿ ಮೂಡಿದೆ, ಪ್ರಕರಣ ದಾಖಲಿಸಿ, ಆರೋಪಿಗಳ ವಿರುದ್ದ ಎಫ್.ಐ.ಅರ್ ಆಗಿದ್ದರೂ ಪೊಲೀಸ್ ಸಿಬ್ಬಂದಿಗಳನ್ನು ಬಂಧನ ಮಾಡದೇ ಇರುವುದು ಸರಿಯಲ್ಲ ಎಂದು ಕಿಡಿಕಾರಿದರು.

ವಕೀಲರ ಮೇಲೆ ಇಂತಹ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರ ಈ ಬೆಳಗಾವಿ ಅಧಿವೇಶನದಲ್ಲಿ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿ, ಉಪ ತಹಸೀಲ್ದಾರ್ ಕುಮಾರ್ ಅವರಿಗೆ ಮನವಿಯನ್ನು ಸಲ್ಲಿಸಿದರು.

ಕಾರ್ಯದರ್ಶಿ ನಟೇಶ್, ವಕೀಲರಾದ ರವೀಂದ್ರ, ರವಿ, ಬಸವರಾಜು, ಮಲ್ಲೇಶ್, ಹರ್ಷವರ್ಧನ್, ಸಿದ್ದಯ್ಯ, ರಾಣಿ, ಅಕ್ಷತಾ, ರೂಪ, ನಾಗರತ್ನ, ಭಾಸ್ಕರ್, ಮುನೀಂದ್ರ ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!