Monday, November 23, 2026

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರ : ಮಕ್ಕಳ ಹಕ್ಕುಗಳ ಆಯೋಗಕ್ಕೆ ಎಎಪಿ ದೂರು

ಮಳವಳ್ಳಿಯಲ್ಲಿ 10 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕು ಆಯೋಗಕ್ಕೆ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕ ದೂರು ನೀಡಿದೆ.

ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಅಕ್ಟೋಬರ್‌ 11, 2022ರಂದು ಹತ್ತು ವರ್ಷದ ಬಾಲಕಿಯನ್ನು ಅತ್ಯಾಚಾರ ಹಾಗೂ ಕೊಲೆ ಮಾಡಿರುವ ದುರ್ಘಟನೆ ನಡೆದಿದೆ. ಕೊಲೆ ಬಳಿಕ ಆಕೆಯ ಮೃತದೇಹವನ್ನು ನಿರ್ಮಾಣ ಹಂತದ ಕಟ್ಟಡದ ಸಂಪ್‌ ಒಳಗೆ ಎಸೆಯಲಾಗಿರುತ್ತದೆ. ಘಟನೆಗೆ ಸಂಬಂಧಿಸಿ ಕಾಂತರಾಜು ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ತಾನೇ ದುಷ್ಕೃತ್ಯ ಎಸೆದಿರುವುದಾಗಿ ಆತ ತಪ್ಪೊಪ್ಪಿಕೊಂಡಿದ್ದಾನೆ. ಬಂಧಿತ ಆರೋಪಿಯು ಈ ಹಿಂದೆಯೂ ಇಂತಹ ದುಷ್ಕೃತ್ಯ ಎಸಗಿದ್ದರೂ ಆತನ ವಿರುದ್ಧ ಪೊಲೀಸರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ದೂರಿದ್ಧಾರೆ.

ಇದೊಂದು ಗಂಭೀರ ಪ್ರಕರಣವಾಗಿದ್ದು, ಪೊಲೀಸ್‌ ಇಲಾಖೆಯ ವೈಫಲ್ಯವು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಆದ್ದರಿಂದ ಹೆಚ್ಚಿನ ತನಿಖೆಗಾಗಿ ಪ್ರಕರರಣವನ್ನು ಸಿಬಿಐಗೆ ವಹಿಸಬೇಕು. ಬಾಲಕಿಯ ಅತ್ಯಾಚಾರ ಹಾಗೂ ಕೊಲೆಗೆ ಕಾರಣರಾದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕು. ಆಗ ಮಾತ್ರ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯುವುದನ್ನು ತಡೆಯಬಹುದು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ