Tuesday, November 24, 2026

ಪ್ರಾಯೋಗಿಕ ಆವೃತ್ತಿ

ಪಾಂಡವಪುರ | ತ್ರಿವರ್ಣ ಧ್ವಜ ಹಾರಿಸದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ

ದೇಶದಾದ್ಯಂತ ಭಾರತೀಯರು ತ್ರಿವರ್ಣ ಧ್ವಜಾರೋಹಣ ಮಾಡಿ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವ ಮಾಡುತ್ತಿದ್ದರೆ, ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮಾಣಿಕ್ಯನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಮಾಡದೆ ಅಪಮಾನ ಮಾಡಲಾಗಿದೆ.

ಪಾಂಡವಪುರ ತಾಲೂಕಿನೆಲ್ಲೆಡೆ ಬಹಳ ಸಂಭ್ರಮ, ಸಡಗರದಿಂದ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಆದರೆ ಮಾಣಿಕ್ಯನಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾತ್ರ ಆಚರಣೆ ಮಾಡಿಲ್ಲ.

ಸಂಘದ ಪ್ರಭಾರಿ ಕಾರ್ಯದರ್ಶಿ ಮಹದೇವ ಅವರು ಧ್ವಜಾರೋಹಣ ನೆರವೇರಿಸದೆ ಅಗೌರವ ತೋರಿದ್ದಾರೆಂದು ಸ್ಥಳೀಯರು ದೂರಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಕೇಳಲು ಹೋದಾಗ ಕಾರ್ಯದರ್ಶಿ ಉದ್ದಟತ‌ನ‌ ಪ್ರದರ್ಶಿಸಿದ್ದಾರೆಂದು ತಿಳಿದು ಬಂದಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ