Friday, September 20, 2024

ಪ್ರಾಯೋಗಿಕ ಆವೃತ್ತಿ

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ₹200 ಇಳಿಕೆ

2024ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಕೇಂದ್ರ ಸರ್ಕಾರವು ಎಲ್ಲ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ₹200 ರೂಪಾಯಿ ಇಳಿಕೆ ಮಾಡಿರುವುದಾಗಿ ಘೋಷಿಸಿದೆ.

ಕೇಂದ್ರ ಸಚಿವ ಸಂಪುಟದ ತೀರ್ಮಾನವನ್ನು ದೆಹಲಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಅನುರಾಗ್ ಠಾಕೂರ್, “ಓಣಂ ಮತ್ತು ರಕ್ಷಾಬಂಧನ್ ಹಬ್ಬದ ಸಂದರ್ಭದಲ್ಲಿ ಎಲ್ಲ ಗ್ರಾಹಕರಿಗೆ ಎಲ್‌ಪಿಜಿ ದರವನ್ನು 200 ರೂಪಾಯಿಗಳಷ್ಟು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಮಹಿಳೆಯರಿಗೆ ಇದು ವಿಶೇಷ ಉಡುಗೊರೆ” ಎಂದು ಹೇಳಿದ್ದಾರೆ.

‘ಬಿಪಿಎಲ್ ಕಾರ್ಡ್​ದಾರರಿಗೆ ನೀಡಲಾಗುವ ಪಿಎಂ ಉಜ್ವಲ ಯೋಜನೆ ಅಡಿಯಲ್ಲಿ ಕೇಂದ್ರ ಸರ್ಕಾರ ಎಲ್​ಪಿಜಿ ಸಿಲಿಂಡರ್​ಗಳ ಮೇಲೂ ಕೂಡ ಹೆಚ್ಚುವರಿ 200 ರೂ. ನಷ್ಟು ಸಬ್ಸಿಡಿ ಕೊಡಲು ನಿರ್ಧರಿಸಿದೆ. ಆ ಮೂಲಕ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಈ ಮೊದಲು ನೀಡುತ್ತಿದ್ದ 200 ರೂ. ಸೇರಿ ಒಟ್ಟು 400 ರೂ. ಸಬ್ಸಿಡಿ ದೊರೆಯಲಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ’ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!