Thursday, September 19, 2024

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕಾ ಹಬ್ಬ ಆಚರಣೆ

ಸರ್ಕಾರಿ ಶಾಲಾ ಮಕ್ಕಳಿಗೆ ಹಲವು ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಿ ವಿದ್ಯಾರ್ಥಿಗಳ ಕಲಿಕಾ ಆಸಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಕಲಿಕಾ ಹಬ್ಬದ ಸಂಭ್ರಮ ಕೇವಲ ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಗ್ರಾಮವೇ ಹಬ್ಬದಲ್ಲಿ ಬಾಗಿಯಾಗುವುದರ ಮೂಲಕ ಮಳವಳ್ಳಿ ತಾಲ್ಲೂಕಿನ ಧನಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕಲಿಕಾ ಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಲಾಯಿತು.

ಗ್ರಾಮದ ತುಂಬ ತಳಿರು ತೋರಣಗಳಿಂದ ಶೃಂಗರಿಸಿ ಪೂಜಾ ಕುಣಿತ, ದಸಾರಾ ಬೊಂಬೆ ಕುಣಿತದ ಜಾನಪದ ಕಲಾಮೇಳ ದೊಂದಿಗೆ ರಾಷ್ಟ್ರ ನಾಯಕರ ಭಾವಚಿತ್ರ ಮೆರವಣಿಗೆಯಲ್ಲಿ ವಿದ್ಯಾರ್ಥಿ, ಶಿಕ್ಷಕರ ಜೊತೆಯಲ್ಲಿ ಗ್ರಾಮಸ್ಥರು ಹೆಜ್ಜೆ ಹಾಕಿದ್ದರಿಂದ ಕಲಿಕಾ ಹಬ್ಬಕ್ಕೆ ಮತ್ತಷ್ಟು ಮೆರಗು ನೀಡಿತು.

ಎಸ್‌ಡಿಎಂಸಿ ಅಧ್ಯಕ್ಷ ಸಕೀಲ್ ಬೇಗ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕಲಿಕಾ ಚೇತರಿಕೆ ಪೂರಕವಾಗಿ ಮಕ್ಕಳು ಚಟುವಟಿಕೆ ಮೂಲಕ ಸಂತೋಷದಾಯಕ ಕಲಿಕೆಯನ್ನು ಮಕ್ಕಳು ಹೊಂದಬೇಕು ಎಂಬ ಚಿಂತನೆಯಲ್ಲಿ ಕಲಿಕಾ ಹಬ್ಬಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.

ಧನಗೂರು ಸರ್ಕಾರಿ ಪ್ರೌಢಶಾಲೆ ಖಾಸಗಿ ಶಾಲೆಗಳಿಂತಲೂ ಕಡಿಮೆ ಇಲ್ಲ ಎಂಬAತೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸುತ್ತಿದೆ, ಜೊತೆಗೆ ಮಕ್ಕಳ ಸಂಖ್ಯೆಯೂ ಹೆಚ್ಚಾಗಿ ತಾಲ್ಲೂಕಿನ ಅತ್ಯೂತ್ತಮ ಶಾಲೆ ಎಂದು ಕೀರ್ತಿ ಪಡೆದಿದ್ದು, ಕಲಿಕಾ ಹಬ್ಬವನ್ನು ಶಿಕ್ಷಣ ಇಲಾಖೆ ಮತ್ತು ಗ್ರಾಮಸ್ಥರ ಸಹಯೋಗದೊಂದಿಗೆ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಎಸ್‌ಪಿ ನಾಗರಾಜು ಮಾತನಾಡಿ, ಕೋವಿಡ್-19 ಸಾಂಕ್ರಾಮಿಕವು ಶಾಲೆಗಳಲ್ಲಿ ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೆ ದುಷ್ಪರಿಣಾಮಗಳನ್ನು ಬೀರಿದ್ದು ಕಲಿಕಾ ಚೇತರಿಕೆ ಕಾರ್ಯಕ್ರಮದ ಯೋಜನೆಯನ್ನು ಈ ಸಮಸ್ಯೆಯ ನಿವಾರಣೆಗಾಗಿಯೇ ಕಲಿಕಾ ಹಬ್ಬವನ್ನು ಹಮ್ಮಿಕೊಳ್ಳಲಾಗಿದೆ, ವಿದ್ಯಾರ್ಥಿಗಳು ಪ್ರಶ್ನೆ ಮಾಡುವ ಹವ್ಯಾಸವನ್ನು ಬೆಳೆಸಿಕೊಂಡಾಗ ಮಾತ್ರ ಹೆಚ್ಚು ಜ್ಞಾನವನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಡಿ.ಹಲಸಹಳ್ಳಿ, ಬಸವನಪುರ, ಚನ್ನಿಪುರ, ಬಾಣಸಮುದ್ರ, ದಬ್ಬಹಳ್ಳಿ, ಶಿಂಷಾಪುರ ಕುರಿಫಾರಂ, ಆಲದಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದರು, ವಿಜ್ಞಾನ ವಸ್ತು ಪ್ರದರ್ಶನವನ್ನು ವಿದ್ಯಾರ್ಥಿಗಳು ವೀಕ್ಷಣೆ ಮಾಡಿದರು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಮನು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಯಪ್ರಕಾಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಸಿದ್ದರಾಜು, ಬಿಆರ್‌ಸಿ ಕುಮಾರ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!