Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರಸ್ವಾಮಿಗೆ ಅದ್ಧೂರಿ ಸ್ವಾಗತ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಅಧಿಕಾರ ವಹಿಸಿ ಕೊಂಡ ನಂತರ ಮೊದಲ ಬಾರಿಗೆ ಮಳವಳ್ಳಿ ಪಟ್ಟಣಕ್ಕೆ ಆಗಮಿಸಿದ ಶಾಸಕ ಪಿ ಎಂ ನರೇಂದ್ರಸ್ವಾಮಿ ಅವರಿಗೆ ಕಾಂಗ್ರೆಸ್ ಕಾರ್ಯಕರ್ತರು ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು.

ಜಾಹೀರಾತು

ಇಂದು ಸಂಜೆ 4 ಗಂಟೆ ಸುಮಾರಿಗೆ ಮಳವಳ್ಳಿ ಪಟ್ಟಣದ ಹೊರವಲಯದ ಶ್ರೀದಂಡಿನ ಮಾರಮ್ಮ ದೇವಸ್ಥಾನದ ಬಳಿ ಆಗಮಿಸಿದ ನರೇಂದ್ರಸ್ವಾಮಿ ಅವರಿಗೆ ಕಾರ್ಯಕರ್ತರು ಭಾರಿ ಪಟಾಕಿ ಸಿಡಿಸಿ ಜಯಘೋಷಗಳೊಂದಿಗೆ ಶಾಲು ಹೊದಿಸಿ ಹೂಗುಚ್ಚ ನೀಡಿ ಅದ್ದೂರಿ ಸ್ವಾಗತ ಕೋರಿದರು. ನಂತರ ದೇವಾಲಯಕ್ಕೆ ಕುಟುಂಬ ಸಮೇತ ಆಗಮಿಸಿದ ಶ್ರೀ ದಂಡಿನ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ ಪಿ ರಾಜು, ದೊಡ್ಡಯ್ಯ, ಮಾಜಿ ಅಧ್ಯಕ್ಷರಾದ ದೇವರಾಜು ಮನ್ ಮುಲ್ ನಿರ್ಧೇಶಕರಾದ ಡಿ ಕೃಷ್ಣೇಗೌಡ, ಆರ್ ಎನ್ ವಿಶ್ವಾಸ್, ಗ್ಯಾರಂಟಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಿಕ್ಕಲಿಂಗಯ್ಯ ಸೇರಿದಂತೆ ಹಲವಾರು ಮುಖಂಡರು ಈ ವೇಳೆ ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ