Friday, September 20, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ಸಂವಿಧಾನ ಜಾಥಕ್ಕೆ ವಿವಿಧೆಡೆ ಅದ್ಧೂರಿ ಸ್ವಾಗತ

ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ನೇತೃತ್ವದಲ್ಲಿ ಚಾಲನೆಗೊಂಡ ಸಂವಿಧಾನ ಜಾಗೃತಿ ಜಾಥವು ಇಂದು ಮೇಲುಕೋಟೆಯಿಂದ ಪ್ರಾರಂಭವಾಗಿ ಜಕ್ಕನಹಳ್ಳಿ, ಮಾಣಿಕ್ನಹಳ್ಳಿ, ಹಳೇಬೀಡು, ಸುಂಕಾತಣ್ಣೂರು, ತಿರುಮಲಸಾಗರ ಛತ್ರ, ಲಕ್ಷ್ಮಿಸಾಗರ, ಹಿರೇಮರಳಿ ಪಂಚಾಯಿತಿಗಳಲ್ಲಿ ಸಂಚರಿಸಿತು, ಈ ಸಂದರ್ಭದಲ್ಲಿ ಸ್ಥಳೀಯ ಗ್ರಾ.ಪಂ. ಜನಪ್ರತಿನಿಧಿಗಳು ಸೇರಿದಂತೆ ಗ್ರಾಮಸ್ಥರು ಜಾಥವನ್ನು ಅದ್ದೂರಿಯಾಗಿ ಬರ ಮಾಡಿಕೊಂಡರು.

ಜಕ್ಕನಹಳ್ಳಿ ಗ್ರಾಮಕ್ಕೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ ವೇಳೆ ಎಲ್ಲಾ ಸಮುದಾಯದ ಮುಖಂಡರು ಡೊಳ್ಳು ಕುಣಿತ, ಬ್ಯಾಂಡ್ ಸೆಟ್ ಮತ್ತು ಪೂರ್ಣ ಕುಂಭದೊಂದಿಗೆ ಸಂವಿಧಾನ ಜಾಗೃತ ಜಾಥವನ್ನು ಅದ್ದೂರಿಯಾಗಿ ಸ್ವಾಗತಿಸಿದರು.

ಸಾರ್ವಜನಿಕರಿಗೆ ಸಂವಿಧಾನದ ಮಹತ್ವ, ಪ್ರಜೆಗಳಿಗೆ ನೀಡಿರುವ ಹಕ್ಕುಗಳು ಹಾಗೂ ಜವಾಬ್ಧಾರಿಗಳ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರಿವು ಮೂಡಿಸಲಾಯಿತು. ಜಾಥಾ ಸಾಗುವ ದಾರಿಯುದ್ದಕ್ಕೂ ವಿವಿಧ ಕಲಾ ತಂಡಗಳಿಂದ ಪೂಜಾ ಕುಣಿತ, ಡೊಳ್ಳು ಕುಣಿತ, ಕಂಸಾಳೆ ನೃತ್ಯ , ಕುಂಭಮೇಳಗಳು ಮತ್ತು ಶಾಲಾ ವಿದ್ಯಾರ್ಥಿಗಳ ಬ್ಯಾಂಡ್ ಸೆಟ್ ವಾದ್ಯಗಳು ಜಾಥಾಕ್ಕೆ ಮೆರುಗು ತಂದವು. ಶಾಲಾ ಪುಟಾಣಿಗಳ ರಾಷ್ಟ್ರ ನಾಯಕರ ವೇಷಭೂಷಣವು ಎಲ್ಲರ ಗಮನ ಸೆಳೆಯುತ್ತಿದ್ದು ವಿಶೇಷವಾಗಿತ್ತು.

ಹಳೇಬೀಡು ಗ್ರಾಮದಲ್ಲಿ ಶಾಲಾ ಮಕ್ಕಳು ಸೈಕಲ್ ಜಾಥಾದೊಟ್ಟಿಗೆ, ಹಿರೇಮರಳಿ ಗ್ರಾಮದಲ್ಲಿ ಮೇಣದಬತ್ತಿ ಬೆಳಗಿಸುವ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಸ್ವಾಗತಿಸಿದರು.

ಪಾಂಡವಪುರ ತಾಲ್ಲೂಕು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು, ಊರಿನ ಮುಖಂಡರು, ಎಲ್ಲಾ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು,ಶಿಕ್ಷಕರು ವಿವಿದ ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಿಬ್ಬಂದಿಗಳು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!