Thursday, September 19, 2024

ಪ್ರಾಯೋಗಿಕ ಆವೃತ್ತಿ

ವಿಶ್ವಕಪ್ ಕ್ರಿಕೆಟ್| ಭಾರತ-ಪಾಕಿಸ್ತಾನ ನಡುವೆ ಹೈ ವೋಲ್ಟೇಜ್ ಪಂದ್ಯ

ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಇಂದು ಹೈವೋಲ್ಟೇಜ್ ಪಂದ್ಯ ನಡೆಯಲಿದ್ದು,ಟಾಸ್ ಗೆದ್ದ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಗುಜರಾತಿನ ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ತೀವ್ರ ಸೆಣಸಾಟ ನಡೆಯಲಿದ್ದು,ಕ್ರಿಕೆಟ್ ಅಭಿಮಾನಿಗಳ ಎದೆಬಡಿತ ಜೋರಾಗಿಸಿದೆ‌.ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುವ ಪಂದಯದ ಮೇಲೆ ವಿಶ್ವದಾದ್ಯಂತ ಜನರು ಕಾತುರರಾಗಿ ಕಾಯುತ್ತಿದ್ದಾರೆ.

2023ರ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಹಾಗೂ ಪಾಕಿಸ್ತಾನ ಎರಡೂ ತಂಡಗಳು ಸತತ ಗೆಲುವಿನೊಂದಿಗೆ ಅಬ್ಬರಿಸುತ್ತಿದೆ.ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 6 ವಿಕೆಟ್‌ಗಳಿಂದ ಸೋಲಿಸಿದ ಟೀಮ್ ಇಂಡಿಯಾ ತನ್ನ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ 8 ವಿಕೆಟ್‌ಗಳಿಂದ ಬೃಹತ್ ಗೆಲುವು ದಾಖಲಿಸಿದೆ. ಇದರೊಂದಿಗೆ ಭಾರತ ತಂಡ 4 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧ ಸತತ ಎರಡು ಗೆಲುವುಗಳನ್ನು ದಾಖಲಿಸಿದ ಭಾರತ ತಂಡ ಉತ್ಸಾಹದಿಂದ ಪುಟಿಯುತ್ತಿದೆ. ಮತ್ತೊಂದೆಡೆ, ಪಾಕಿಸ್ತಾನವು ನೆದರ್ಲ್ಯಾಂಡ್ ಮತ್ತು ಶ್ರೀಲಂಕಾ ವಿರುದ್ಧ ಸತತ ಎರಡು ಗೆಲುವುಗಳನ್ನು ದಾಖಲಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಭಾರತ ತಂಡದ ಪರ ನಾಯಕ ರೋಹಿತ್ ಶರ್ಮ, ವಿರಾಟ್ ಕೊಹ್ಲಿ, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್ ಬ್ಯಾಟಿಂಗ್ ಬೆನ್ನೆಲುಬು ಆಗಿದ್ದಾರೆ. ಬೌಲಿಂಗ್ ನಲ್ಲಿ ಜಸ್ ಪ್ರೀತ್ ಬೂಮ್ರಾ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಸ್ಪಿನ್ನರ್ ಗಳಾದ ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್.ಅಶ್ವಿನ್ ಅಬ್ಬರಿಸಲು ಸಜ್ಜಾಗಿದ್ದಾರೆ. ಶುಭಮನ್ ಗಿಲ್ ತಂಡಕ್ಕೆ ವಾಪಾಸ್ ಆಗಿರುವುದು ಬಲ ತಂದಿದೆ.

ಪಾಕಿಸ್ತಾನದ ಪರ ನಾಯಕ ಬಾಬರ್ ಅಜಂ, ಶಾದಾಬ್ ಖಾನ್, ಫಕಾರ್ ಜಮಾನ್, ಅಬ್ದುಲ್ ಶಫಿಕ್, ಮೊಹಮ್ಮದ್ ರಿಜ್ವಾನ್ ಬೌಲಿಂಗ್ ನಲ್ಲಿ ಶಾಹಿನ್ ಆಫ್ರಿದಿ, ಹ್ಯಾರಿಸ್ ರೌಫ್,ಇಫ್ತಿಕಾರ್ ಅಹಮದ್ ಬಲವಿದೆ.
ಒಟ್ಟಾರೆ ಇಂದು ನಡೆಯುವ ಹೈ ವೋಲ್ಟೇಜ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗಾಗಿ ದೇಶಾದ್ಯಂತ ಜನರು ಪೂಜೆ,ಪುನಸ್ಕಾರಗಳಲ್ಲಿ ತೊಡಗಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!