ವರದಿ: ರಂಗನಾಥ್
ಕೆ.ಆರ್.ಪೇಟೆ ತಾಲ್ಲೂಕಿನ ಭಾರತೀಪುರ ಗ್ರಾಮದ ಗ್ರಾ.ಪಂ. ಮಾಜಿ ಅಧ್ಯಕ್ಷ ಸುರೇಶ್ ಎಂಬುವರ ತೋಟದ ಮನೆಯಲ್ಲಿದ್ದ ಸಾಕು ನಾಯಿ ಮೇಲೆ ದಾಳಿ ನಡೆಸಿದ ಚಿರತೆಯೊಂದು ನಾಯಿಯ ಮುಕ್ಕಾಲು ಭಾಗವನ್ನು ತಿಂದು ಹಾಕಿರುವ ಘಟನೆ ಕಳೆದ ನಡುರಾತ್ರಿ ನಡೆದಿದೆ.
ಚಿರತೆಯು ಆಹಾರ ಅರಸಿ ಬಂದ ಚಿರತೆಯು ಸಾಕು ನಾಯಿಯ ಮೇಲೆ ದಾಳಿ ನಡೆಸಿ, ಮುಕ್ಕಾಲು ಭಾಗವನ್ನು ತಿಂದು ಹಾಕಿದೆ. ಸುತ್ತಮುತ್ತಲಿನ ಗ್ರಾಮಗಳಲ್ಲಿ ಚಿರತೆಯ ಹಾವಳಿ ಹೆಚ್ಚಾಗಿ ಕಂಡು ಬಂದಿದ್ದು ಸ್ಥಳಿಯರಲ್ಲಿ ಆತಂಕ ಮೂಡಿದೆ. ಸಂಬಂಧಪಟ್ಟ ಅರಣ್ಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಚಿರತೆಯನ್ನು ಸೆರೆ ಹಿಡಿಯಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.