ಮಂಡ್ಯ ನಗರದ ಕಲ್ಲಹಳ್ಳಿ ಖಾಸಗಿ ಫಂಕ್ಷನ್ ಹಾಲ್‌ನಲ್ಲಿ ಜಾತ್ಯಾತೀತ ಜನತಾದಳದ ಕಾರ್ಯಕರ್ತರ ಪೂರ್ವಭಾವಿ ಸಭೆಯು ಮನ್‌ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ನೇತೃತ್ವದಲ್ಲಿ ನಡೆಯಿತು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕೆನ್ನುವ ದೃಷ್ಟಿಯಿಂದ ಪೂರ್ವಭಾವಿ ಸಭೆ ನಡೆಸಲಾಗಿದೆ, ಬೂದನೂರು ಸ್ವಾಮಿ ಅವರು ಜೆಡಿಎಸ್ ಪಕ್ಷದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿರುತ್ತಾರೆ, ಹಾಗಾಗಿ ಅವರನ್ನು ಮಂಡ್ಯ ತಾಲ್ಲೂಕು ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಕೆರಗೋಡು ಕ್ಷೇತ್ರದಲ್ಲಿ ಮಾರಗೌಡನಹಳ್ಳಿ ವಸಂತರಾಜು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಸಭೆಯಲ್ಲಿ ಮನ್‌ಮುಲ್ ಉಪಾಧ್ಯಕ್ಷ ರಘುನಂದನ್, ನಗರಸಭೆ ಮಾಜಿ ಅಧ್ಯಕ್ಷ ಎಚ್.ಎಸ್.ಮಂಜು, ಕೆ.ಸಿ.ನಾಗಮ್ಮ, ನರಗಸಭೆ ಸದಸ್ಯ ನಾಗೇಶ್, ಮುಖಂಡರಾದ ಸಿದ್ದರಾಮೇಗೌಡ, ಸಾತನೂರು ಜಯರಾಂ, ನವೀನ್, ಕಿರಣ್‌ಕುಮಾರ್, ಪದ್ಮಾವತಿ, ಸೌಭಾಗ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.




