Thursday, April 18, 2024

ಪ್ರಾಯೋಗಿಕ ಆವೃತ್ತಿ

ಮೊಬೈಲ್ ಕ್ಲಿನಿಕ್ ಮೂಲಕ ಆರೋಗ್ಯ ತಪಾಸಣಾ ಶಿಬಿರ ಅಗತ್ಯ: ದಡದಪುರ ಶಿವಣ್ಣ

ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ಕ್ಲಿನಿಕ್ ಮೂಲಕ ಆರೋಗ್ಯ ತಪಾಸಣಾ ಶಿಬಿರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಮ್ಮಿಕೊಳ್ಳಬೇಕಾಗಿದೆ ಎಂದು ರಾಮಮನೋಹರ ಲೋಹಿಯಾ ವಿಚಾರ ವೇದಿಕೆ ರಾಜ್ಯಾಧ್ಯಕ್ಷ ದಡದಪುರ ಶಿವಣ್ಣ ಒತ್ತಾಯಿಸಿದರು.

ಮಳವಳ್ಳಿ ಪಟ್ಟಣದ ಸರ್ಕಾರಿ ಬಾಲಕಿಯರ ಪ್ರೌಡಶಾಲೆ ಆವರಣದಲ್ಲಿ ಲೋಹಿಯಾ ವಿಚಾರ ವೇದಿಕೆ ವತಿಯಿಂದ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರಧಾನಿ ಮೋದಿರವರು ರಾಮ ಮಂದಿರ ಕಟ್ಟುವ ಬದಲು ಸಾವಿರಾರು ಆರೋಗ್ಯ ಮಂದಿರಗಳನ್ನು ಕಟ್ಟಬೇಕಾಗಿದೆ ಜೊತೆಗೆ ಮಕ್ಕಳ ವಿದ್ಯಾಭ್ಯಾಸ ಕ್ಕಾಗಿ ಮಾಡಿರುವ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಇದಲ್ಲದೆ ಶಾಲಾಮಕ್ಕಳಿಗೆ ಉಚಿತವಾಗಿ ಹೆಲ್ತ್ ಕಿಟ್ ಗಳನ್ನು ವಿತರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು ಎಂದರು

ಈಗಾಗಲೇ 2020 ರಲ್ಲಿ ತಾಲ್ಲೂಕಿನ 16200 ಶಾಲಾ ಮಕ್ಕಳಿಗೆ ಉಚಿತವಾಗಿ ಲೋಹಿಯಾ ವಿಚಾರ ವೇದಿಕೆ ವತಿಯಿಂದ ವಿತರಿಸಿದ್ದು ಇದೇ ರೀತಿ ದೇಶ ವ್ಯಾಪ್ತಿ ಈ ಯೋಜನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಸೇವಕ ಪ್ರಕಾಶ, ರಮೇಶ ಚಂದ್ರ, ಸೋಮಶೇಖರ, ಡಾ.ಪವನ್, ಡಾ.ಅರುಣ್, ಡಾ.ವರುಣ ಸೇರಿದಂತೆ ಹಲವರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!