Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯನಗರಕ್ಕೆ ಹೊಸ ರೂಪ ನೀಡುವುದು ನನ್ನ ಗುರಿ : ಗಣಿಗ ರವಿಕುಮಾರ್

ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಅಮೃತ್ ಯೋಜನೆಯಡಿ 13 ಕೋಟಿ ರೂ. ವೆಚ್ಚದಲ್ಲಿ ಡಾಂಬರೀಕರಣ, ಒಳಚರಂಡಿ ಮತ್ತಿತರ ಅಭಿವೃದ್ಧಿ ಕಾರ್ಯಗಳ ಮೂಲಕ ಮಂಡ್ಯ ನಗರಕ್ಕೆ ಹೊಸ ರೂಪ ನೀಡಲಾಗುವುದೆಂದು ಅತ್ಯುನ್ನತ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದೆಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ಮಂಡ್ಯ ನಗರದ ನೂರಡಿ ರಸ್ತೆಯ ವಾಟರ್ ಟ್ಯಾಂಕ್ ಬಳಿ 3 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ರಸ್ತೆ ಅಭಿವೃದ್ದಿಯ ನೀಲಿನಕ್ಷೆ

ಮಂಡ್ಯ ನಗರಕ್ಕೆ ಹೊಸ ರೂಪ ನೀಡುವ ಮೂಲಕ ಇಡೀ ಜಿಲ್ಲೆಯಲ್ಲಿ ಮಂಡ್ಯ ನಗರವನ್ನು ಮಾದರಿಯಾಗಿ ನಿರ್ಮಿಸಲಾಗುವುದು. ಹೊಸಹಳ್ಳಿ ಸರ್ಕಲ್ ನಿಂದ ಕನ್ನಿಕಾ ಪರಮೇಶ್ವರಿ ದೇವಸ್ಥಾನದವರೆಗೆ 700 ಮೀಟರ್ ರಸ್ತೆ ಅಭಿವೃದ್ದಿಗೆ 3 ಕೋಟಿ ರೂ. ವೆಚ್ಚ ಮಾಡಲಾಗುವುದು. ಚರಂಡಿ ಅಭಿವೃದ್ದಿ, ವೃತ್ತ ನಿರ್ಮಾಣ, ವಿದ್ಯುತ್ ದೀಪಗಳ ಅಳವಡಿಕೆ ಹಾಗೂ ರಸ್ತೆ ಬದಿಯ ಒಂದು ಭಾಗದಲ್ಲಿ ಹೂವಿನ ಗಿಡಗಳನ್ನು ನೆಟ್ಟು ಅಭಿವೃದ್ದಿಪಡಿಸಲಾಗುವುದು ಎಂದು ಹೇಳಿದರು.

ಮಂಡ್ಯ ನಗರದಲ್ಲಿ ಹಲವಾರು ವರ್ಷಗಳಿಂದ ಹಳೆ ರಸ್ತೆಗಳಿದ್ದು ಅದರ ಮೇಲೆಯೇ ಡಾಂಬರೀಕರಣ ಮಾಡಲಾಗುತ್ತಿತ್ತು.ಈಗ ಮಂಡ್ಯ ನಗರಕ್ಕೆ ಹೊಸ ರೂಪ ನೀಡುವ ಉದ್ದೇಶದಿಂದ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು. ಆಯ್ದ ವೃತ್ತಗಳನ್ನು ಅತ್ಯಾಧುನಿಕ ಮಾದರಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದರು.

ಹಾಗೆಯೇ ಮುಂದಿನ ದಿನಗಳಲ್ಲಿ ಹೊಳಲು ರಸ್ತೆ,ಗುತ್ತಲು ಬಡಾವಣೆಯ ಬೆನಕ ಕಲ್ಯಾಣ ಮಂಟಪದ ಪಕ್ಕದ ರಸ್ತೆ, ಚಾಮುಂಡೇಶ್ವರಿ ನಗರ ಹಾಗೂ ಹೊಸಹಳ್ಳಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುವುದು.ಉತ್ತಮ ಗುಣಮಟ್ಟದ ಹೊಸ ವಿದ್ಯುತ್ ಕಂಬಗಳನ್ನು ಅಳವಡಿಸಿ ಮೂರು ತಿಂಗಳಲ್ಲಿ ಕಾಮಗಾರಿ ಮುಗಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ನಾಗೇಶ್, ಉಪಾಧ್ಯಕ್ಷ ಅರುಣ್ ಕುಮಾರ್, ಆಯುಕ್ತೆ ಪಂಪಾಶ್ರೀ, ಮುಡಾ ಅಧ್ಯಕ್ಷ ನಹೀಮ್, ಸದಸ್ಯರಾದ ಶ್ರೀಧರ್,ಶಿವಪ್ರಕಾಶ್, ಪೂರ್ಣಿಮ, ಗೀತಾ ಮುಖಂಡರಾದ ಅಭಿಷೇಕ್, ದೀಪಕ್,ಮಹೇಶ್,ಸತೀಶ್ ಮತ್ತಿತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ