Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಸ್ವಂತ ನೆಲೆಯಿಲ್ಲದವರಿಗೆ ಶಾಶ್ವತ ಸೂರು: ನರೇಂದ್ರಸ್ವಾಮಿ

ಮಳವಳ್ಳಿ ತಾಲ್ಲೂಕಿನ ಕೃಷ್ಣೇಗೌಡನ ದೊಡ್ಡಿ ಗ್ರಾಮದಲ್ಲಿ ಹಲವು ವರ್ಷಗಳಿಂದ ಸ್ವಂತ ನೆಲೆಯಿಲ್ಲದೇ ವಾಸಿಸುತ್ತಿರುವ ಬಡ ಕುಟುಂಬ ವರ್ಗಗಳಿಗೆ ಸುಮಾರು 45 ನಿವೇಶನಗಳನ್ನು ಉಚಿತವಾಗಿ ನೀಡಿ, ಶಾಶ್ವತ ನೆಲೆ ಒದಗಿಸಲಾಗುವುದು ಎಂದು ಶಾಸಕ ನರೇಂದ್ರಸ್ವಾಮಿ ಹೇಳಿದರು.

ಮಳವಳ್ಳಿ ತಾಲ್ಲೂಕಿನ ಹಲಗೂರು ಹೋಬಳಿ ವ್ಯಾಪ್ತಿಯ ಬ್ಯಾಡರಹಳ್ಳಿ ಗ್ರಾಮದ ಕೆರೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸೂರು ಒದಗಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಸೂಕ್ತ ರೀತಿಯಲ್ಲಿ ವಸತಿ ವ್ಯವಸ್ಥೆಯನ್ನು ಮಾಡಿಕೊಡಬೇಕೆಂದು ನಿರ್ದೇಶಿಸಿದರು.

ಇದೇ ಸಂದರ್ಭದಲ್ಲಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪುಸ್ತಕ ಮತ್ತು ಪೆನ್ನು ವಿತರಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ