Sunday, May 19, 2024

ಪ್ರಾಯೋಗಿಕ ಆವೃತ್ತಿ

ಉತ್ತರಪ್ರದೇಶ| ನಡುರಸ್ತೆಯಲ್ಲಿ ಮಹಿಳೆಗೆ ಥಳಿಸಿದ ಪೊಲೀಸ್ ಅಧಿಕಾರಿ: ವೈರಲ್ ಆದ ವೀಡಿಯೋ

ಉತ್ತರಪ್ರದೇಶದ ಮಥುರಾದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಮಹಿಳೆಯೊಂದಿಗೆ ನಡುರಸ್ತೆಯಲ್ಲಿ ಜಗಳವಾಡುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ.

ವಿಡಿಯೋ ವೈರಲ್ ಬೆನ್ನಲ್ಲೇ ಪೊಲೀಸ್ ಅಧಿಕಾರಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ವರದಿಗಳ ಪ್ರಕಾರ, ಪಾಣಿಗಾಂವ್ ಸಂಪರ್ಕ ರಸ್ತೆಯಿಂದ ಕೈಲ್ಸಾ ನಗರಕ್ಕೆ ತೆರಳುವ ತಿರುವಿನಲ್ಲಿ ನಿಂತಿದ್ದ ಪೊಲೀಸ್ ಅಧಿಕಾರಿ ಮಹಿಳೆ ಮಾರುಕಟ್ಟೆಯಿಂದ ಶಾಪಿಂಗ್ ಮುಗಿಸಿ ಮನೆಗೆ ಮರಳುತ್ತಿದ್ದ ಆಟೋವನ್ನು ನಿಲ್ಲಿಸಿದ್ದಾರೆ. ಪೊಲೀಸ್ ಅಧಿಕಾರಿ ತನ್ನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆಂದು ಆರೋಪಿಸಿ ಮೊದಲು ಮಹಿಳೆ ಅಧಿಕಾರಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.

“>

ಮಹಿಳೆ ಚಪ್ಪಲಿಯಿಂದ ಹೊಡೆದ ಬೆನ್ನಲ್ಲೇ ಪೊಲೀಸ್ ಅಧಿಕಾರಿ ಮಹಿಳೆಯನ್ನು ಒದ್ದು ತಳ್ಳಿದ್ದಾರೆ. ಈ ವೇಳೆ  ಸ್ಥಳದಲ್ಲಿದ್ದ ಇತರ ಪೊಲೀಸ್ ಸಿಬ್ಬಂದಿ ಆತನನ್ನು ತಡೆದು ಮಹಿಳೆಗೆ ಹೊಡೆಯದಂತೆ ತಡೆದಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಘಟನೆ ನಡೆದಿದೆ.

ಇದೀಗ ಘಟನೆಗೆ ಸಂಬಂಧಿಸಿ ಸಂತ್ರಸ್ತೆ ಮಹಿಳೆ ಪೊಲೀಸ್ ಅಧಿಕಾರಿ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ತನಿಖೆ ಬಳಿಕ ತಪ್ಪು ಕಂಡು ಬಂದಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!