Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಾಸನ| ಎಸ್ಪಿ ಕಚೇರಿ ಮುಂದೆಯೇ ಪತ್ನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಪೇದೆ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಗೆ ಚಾಕು ಇರಿದು ಕೊಲೆ ಮಾಡಿರೋ ಘಟನೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಇಂದು ನಡೆದಿದೆ.

ಹಾಸನ ನಗರ ಪೊಲೀಸ್ ಠಾಣೆ ಪೇದೆ ಲೋಕನಾಥ್ ಎಂಬುವವ ತನ್ನ ಪತ್ನಿ ಮಮತಾಗೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂಭಾಗ ಚಾಕುವಿನಿಂದ ಇರಿದಿದ್ದಾನೆ. ಮಮತರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪತ್ನಿಯನ್ನು ಕೂಲೆ ಮಾಡಿ ಆರೋಪಿ ಲೋಕನಾಥ್ ಪರಾರಿಯಾಗಲು ಯತ್ನಿಸಿದ್ದ. ಆ ಸಂದರ್ಭ ಆರೋಪಿ ಪೇದೆ ಲೋಕನಾಥನನ್ನು ಎಸ್‌ಪಿ ಕಚೇರಿ ಪೊಲೀಸರು ವಶಕ್ಕೆ ಪಡೆದುಕೊಂಡು, ತನಿಖೆ ನಡೆಸುತ್ತಿದ್ದಾರೆ..

ಕಳೆದ ನಾಲ್ಕೈದು ದಿನಗಳಿಂದ ಗಂಡ- ಹೆಂಡತಿ ನಡುವೆ ಜಗಳ ನಡೆಯುತ್ತಲೇ ಇತ್ತು. ಇಂದು ಪತಿ ವಿರುದ್ಧವೇ ಮಮತಾ ದೂರು ನೀಡಲು ಎಸ್‌ಪಿ ಕಚೇರಿಗೆ ಬಂದಿದ್ದರು. ಈ ವೇಳೆ ಲೋಕನಾಥ್ ಕೆಂಡಮಂಡಲನಾಗಿ ಪತ್ನಿ ಮಮತಾಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!