ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಮಾರಗೌಡನಹಳ್ಳಿ ಗ್ರಾಮದ ಶ್ರೀ ತಿರುಮಲ ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ಶ್ರೀ ಶಂಭು ಸೇವಾ ಟ್ರಸ್ಟ್ ಮತ್ತು ಮನ್ಮುಲ್ ಅಧ್ಯಕ್ಷ ಬಿ.ಆರ್ ರಾಮಚಂದ್ರು 1,00,000(ಒಂದು ಲಕ್ಷ)ರೂ. ಧನಸಹಾಯ ನೀಡಿದರು.

ಹಾಗೆಯೇ ಬಸರಾಳು ಹೋಬಳಿಯ ಮುತ್ತೇಗೆರೆ ಗ್ರಾಮದ ಶ್ರೀ ಲಕ್ಷ್ಮಿ ದೇವಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಗ 25,000ರೂ. ಧನಸಹಾಯ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮನ್ಮುಲ್ ನಿರ್ದೇಶಕ ಬಿ.ಆರ್. ರಾಮಚಂದ್ರು,ಈಗಾಗಲೇ ಹಲವು ದೇವಸ್ಥಾನಗಳ ನಿರ್ಮಾಣ ಹಾಗೂ ಜೀರ್ಣೋದ್ಧಾರಕ್ಕೆ ಶಂಭು ಸೇವಾ ಟ್ರಸ್ಟ್ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಲಾಗಿದೆ.ಮುಂದಿನ ದಿನಗಳಲ್ಲಿ ಇನ್ನಷ್ಟು ದೇವಾಲಯಗಳಿಗೆ ಸಹಾಯಧನ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಗೋಪಾಲಣ್ಣ, ನಾಗೇಶ್ ಮೂರ್ತಿ,ವರದರಾಜು, ಆನಂದ್, ಮಾಯಾಚಾರಿ ಮರಿಗೌಡ್ರು, ಕೆಂಪಣ್ಣ ,ಪಾಪಣ್ಣ ಊರಿನ ಗ್ರಾಮಸ್ಥರು ಮತ್ತಿತರರು ಉಪಸ್ಥಿತರಿದ್ದರು.




