Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಶಾಲಾ ವಿದ್ಯಾರ್ಥಿನಿ ನಾಪತ್ತೆ ; ಪತ್ತೆಗಾಗಿ 3 ತಂಡಗಳ ರಚನೆ

ಮಂಡ್ಯನಗರದ ಹೊಸಹಳ್ಳಿಯಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿನಿಯೊಬ್ಬರು ನಾಪತ್ತೆಯಾಗಿರುವ ಬಗ್ಗೆ ಮಂಡ್ಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಷಕರಾದ ಪ್ರಕಾಶ್ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಲಕಿಯ ಪತ್ತೆಗಾಗಿ ಮಂಡ್ಯ ಪೊಲೀಸರು ಮೂರು ತಂಡಗಳನ್ನು ರಚನೆ ಮಾಡಿದ್ಧಾರೆಂದು ತಿಳಿದು ಬಂದಿದೆ.

ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಲಿಖಿತಾ ಶಾಲೆಗೆ ಹೋಗುವುದಾಗಿ ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆಂದು ಪೋಷಕರು ದೂರಿನಲ್ಲಿ ತಿಳಿಸಿದ್ಧಾರೆ. ಆಕೆ ಬರೆದ ಎರಡು ಪುಟಗಳ ಪತ್ರ, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ಧಾರೆ.

ವಿದ್ಯಾರ್ಥಿನಿಯ ಬಗ್ಗೆ ಮಾಹಿತಿ ಸಿಕ್ಕವರು ಮೊ.9986354443 ಇವರನ್ನು ಸಂಪರ್ಕಿಸುವಂತೆ ಕೋರಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!