Thursday, September 19, 2024

ಪ್ರಾಯೋಗಿಕ ಆವೃತ್ತಿ

ಸುಪ್ರೀಂನಲ್ಲಿ ಕರ್ನಾಟಕಕ್ಕೆ ಹಿನ್ನಡೆ: 15 ದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ದೇಶನ

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಹತ್ವದ ನಿರ್ದೇಶನ ಹೊರಡಿಸಿದ್ದು,ರಾಜ್ಯಕ್ಕೆ ಹಿನ್ನಡೆ ಉಂಟಾಗಿದೆ.

ಮುಂದಿನ 15 ದಿನ ಪ್ರತಿದಿನವೂ ತಮಿಳುನಾಡಿಗೆ ಐದು ಸಾವಿರ ಕ್ಯೂಸೆಕ್ ನೀರು ಹರಿಸಲು ಗುರುವಾರ ತಿಳಿಸಿದ್ದು,ರಾಜ್ಯದ ಪಾಲಿಗೆ ಕಂಟಕವಾಗಿದೆ.

ಆ ಮೂಲಕ ಕಾವೇರಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿದ್ದ ತ್ರಿಸದಸ್ಯ ಪೀಠವು ಸಿಡಬ್ಲ್ಯು ಎಂಎ ಆದೇಶದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

ಈ ಮೂಲಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣಾ ಸಮಿತಿ ಈ ಹಿಂದೆ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕವು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ ಮನವಿಯನ್ನು ತಿರಸ್ಕರಿಸಿರುವ ತ್ರಿಸದಸ್ಯ ಪೀಠವು ಮಾನ್ಯ ಮಾಡಲಿಲ್ಲ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಪೀಠ ನಿರಾಕರಿಸಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ಸೂಚನೆ ನೀಡಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ಹೊರಡಿಸಿತ್ತು. ಈ ನಿರ್ಧಾರವನ್ನು ಎತ್ತಿ ಹಿಡಿದಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ತಮಿಳುನಾಡಿಗೆ ಸೆಪ್ಟೆಂಬರ್​ 13ರಿಂದ ಅನ್ವಯವಾಗುವಂತೆ 15 ದಿನಗಳ ಕಾಲ ಪ್ರತಿದಿನ ಐದು ಸಾವಿರ ಕ್ಯೂಸೆಕ್​ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿತ್ತು.

ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!