Friday, November 20, 2026

ಪ್ರಾಯೋಗಿಕ ಆವೃತ್ತಿ

ದೆಹಲಿ| ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕನ ಕತ್ತು ಸೀಳಿ ಕೊಲೆ ಮಾಡಿದ ವಿದ್ಯಾರ್ಥಿ !

ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಶಿಕ್ಷಕನನ್ನು 14 ವರ್ಷದ ಬಾಲಕ ಕೊಲೆ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
28ರ ಹರೆಯದ ಶಿಕ್ಷಕ, ಬಾಲಕನಿಗೆ ನಿತ್ಯ ನಿಂದನೆ ಮಾಡಿ, ಹಲ್ಲೆ ಮಾಡಿ ವಿಡಿಯೋ ಕೂಡ ಮಾಡಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಮೂರು ದಿನಗಳ ಬಳಿಕ  ಕೊಲೆ ಆರೋಪಿ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ.
ಆಗಸ್ಟ್ 30 ರಂದು ಮಧ್ಯಾಹ್ನ 2.15 ರ ಸುಮಾರಿಗೆ ದೆಹಲಿಯ ಜಾಮಿಯಾ ನಗರದ ಬಟ್ಲಾ ಹೌಸ್‌ನ  ಎರಡನೇ ಮಹಡಿಯ ಕೊಠಡಿಯಲ್ಲಿ ರಕ್ತ ಚೆಲ್ಲಿದೆ ಎಂದು ಕರೆ ಬಂದಿತ್ತು. ಮನೆಯ ಬಾಗಿಲು ತೆರೆದಿತ್ತು. ಪೊಲೀಸ್ ತಂಡವು ತೆರಳಿ ನೋಡಿದಾಗ ಶಿಕ್ಷಕ ಕತ್ತಿನ ಮೇಲೆ ಆಳವಾದ ಗಾಯಗಳೊಂದಿಗೆ ನೆಲದ ಮೇಲೆ ಬಿದ್ದಿದ್ದರು ಎಂದು ಆಗ್ನೇಯ ದೆಹಲಿ ಡಿಸಿಪಿ ರಾಜೇಶ್ ಡಿಯೋ ಹೇಳಿದ್ದಾರೆ.
ಈ ಕುರಿತು ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಶಿಕ್ಷಕನು ಬಾಲಕನ ಜೊತೆ ದೈಹಿಕ ಸಂಬಂಧ ಹೊಂದಿದ್ದ ಎಂದು ತಿಳಿದು ಬಂದಿದೆ.
ಎರಡು ತಿಂಗಳ ಮೊದಲು ಶಿಕ್ಷಕ, ಬಾಲಕನನ್ನು ಭೇಟಿಯಾಗಿದ್ದ, ಆ ಬಳಿಕ ಹಲವು ಬಾರಿ  ಬಾಲಕನನ್ನು ಲೈಂಗಿಕವಾಗಿ ಬಳಸಿಕೊಂಡಿದ್ದ ಎಂದು ಬಾಲಕ ಆರೋಪಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇದಲ್ಲದೆ ಬಾಲಕನ ಖಾಸಗಿ ವೀಡಿಯೋ ಚಿತ್ರೀಕರಿಸಿದ್ದ ಶಿಕ್ಷಕ ತನಗೆ ಸಹಕರಿಸದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.
ಘಟನೆ ನಡೆದ ದಿನದಂದು, ತನ್ನ ಜಾಮಿಯಾ ನಗರದ ಮನೆಯಲ್ಲಿ ತನ್ನನ್ನು ಭೇಟಿಯಾಗುವಂತೆ ಶಿಕ್ಷಕ ಬಾಲಕನಿಗೆ ಹೇಳಿದ್ದ, ಬಾಲಕ ಅದರಂತೆ ಹರಿತವಾದ ಆಯುಧದೊಂದಿಗೆ  ಅಪಾರ್ಟ್‌ಮೆಂಟ್‌ಗೆ ತೆರಳಿ, ಶಿಕ್ಷಕನ ಕತ್ತು ಸೀಳಿ ಪರಾರಿಯಾಗಿದ್ದಾನೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ