Saturday, May 4, 2024

ಪ್ರಾಯೋಗಿಕ ಆವೃತ್ತಿ

ಟಿ.ನರಸೀಪುರ | ಭೀಕರ ಅಪಘಾತದಲ್ಲಿ10 ಮಂದಿ ಸಾವು

ಕೊಳ್ಳೇಗಾಲ ಮತ್ತು ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿನ ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಭೀಕರ ಅಪಘಾತ ಸಂಭವಿಸಿ ಹತ್ತು ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ.

ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ. ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ.

ಅಪಘಾತದ ಭೀಕರತೆಗೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡಿದ್ದವರು ಕೂಡ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ಮಧ್ಯಾಹ್ನ ಟಿ.ನರಸೀಪುರ ಮುಖ್ಯ ರಸ್ತೆಯ ಕುರುಬೂರು ಗ್ರಾಮದ ಬಳಿಕ ಇನೋವಾ ಕಾರು ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರವಾಗಿ ಗಾಯಗೊಂಡಿದ್ದವರನ್ನು ಆಸ್ಪತ್ರೆಗೆ ಕರೆತರಲಾಗುತ್ತಿತ್ತು. ಆದರೆ ಮಾರ್ಗ ಮಧ್ಯೆದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ಹತ್ತುಮಂದಿ ಸಾವನ್ನಪ್ಪಿದ್ದಾರೆ.

ಮೃತ ಹತ್ತು ಜನರು ಬಳ್ಳಾರಿ ಮೂಲದವರೆಂದು ತಿಳಿದು ಬಂದಿದೆ. ಟಿ.ನರಸೀಪುರ ಮುಖ್ಯ ರಸ್ತೆಯ ಮಾರ್ಗವಾಗಿ ತೆರಳುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್‌ಗೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಅಪಘಾತ ಸಂಬಂಧ ಟಿ.ನರಸೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಮೃತರಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಹಾಗೂ ಮೂವರು ಮಕ್ಕಳಾಗಿದ್ದಾರೆ. 16 ಮಂದಿ ಗಾಯಾಳುಗಳಿಗೆ ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!