Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಂಡೀಪುರ ಅರಣ್ಯದಲ್ಲಿ ನಡೆದ ಗುಂಡಿನ ಚಕಮಕಿಗೆ ಯುವಕ ಬಲಿ

ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಕಡವೆ ಬೇಟೆಯಾಡುವ ತಂಡ ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಬೇಟೆಗಾರರ ತಂಡದಲ್ಲಿದ್ದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾದ ಘಟನೆ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ನಿವಾಸಿ ಮನು (27) ಗುಂಡಿನ ದಾಳಿಗೆ ಬಲಿಯಾದ ಯುವಕ. ಅರಣ್ಯಕ್ಕೆ ಬಂದೂಕು ಹಾಗೂ ಇತರೆ ಶಸ್ತ್ರಾಸ್ತ್ರಗಳ ಜೊತೆ  10 ಮಂದಿಯ ತಂಡ ಕಡವೆಯನ್ನು ಬೇಟೆಯಾಡಲು ತೆರಳಿತ್ತು.

ಅರಣ್ಯ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ ಗಸ್ತಿನಲ್ಲಿದ್ದ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದ್ದಾರೆ ಆದರೆ ಬೇಟೆಗಾರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಅತ್ಮರಕ್ಷಣೆಗಾಗಿ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದು, ತಂಡದಲ್ಲಿದ್ದ ಮನು ಗುಂಡು ತಗುಲಿ ಮೃತಪಟ್ಟಿದ್ದಾರೆ. ಮನು ಜೊತೆಗಿದ್ದ ಉಳಿದ ಬೇಟೆಗಾರರು ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಎಸ್‌ಪಿ ಪದ್ಮಿನಿ ಸಾಹು ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಿಂದ 120 ಕೆಜಿ ಕಡವೆ ಮಾಂಸ, ಒಂದು ಸಿಂಗಲ್ ಬ್ಯಾರೆಲ್ ಗನ್ ಸೇರಿದಂತೆ ಇತರೆ ಆಯುಧಗಳನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದವರ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!