Monday, October 28, 2024

ಪ್ರಾಯೋಗಿಕ ಆವೃತ್ತಿ

ತುಮಕೂರು | ಸೆಲ್ಫಿ ತೆಗೆಯಲು ಹೋಗಿ ಕೊಚ್ಚಿ ಹೋಗಿದ್ದ ಯುವತಿ ; ಸತತ 12 ಗಂಟೆಯ ಕಾರ್ಯಾಚರಣೆ ನಂತರ ರಕ್ಷಣೆ

ತುಮಕೂರಿನ ಮಂದಾರಗಿರಿ ಬೆಟ್ಟದ ಹಿಂಭಾಗದ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ (ಅ.27) ಸಂಜೆ ಸೆಲ್ಫಿ ತೆಗೆದುಕೊಳ್ಳುವಾಗ ಕೊಚ್ಚಿ ಹೋಗಿದ್ದ ಹಂಸ (20) ಎಂಬ ವಿದ್ಯಾರ್ಥಿನಿಯನ್ನು ಸತತ 12 ಗಂಟೆಗಳ ಕಾರ್ಯಾಚರಣೆ ರಕ್ಷಣೆ ಮಾಡಲಾಗಿದೆ.

ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಸೋಮನಾಥ್ ಎಂಬುವರ ಪುತ್ರಿ ಹಂಸ ಅವರನ್ನು ರಕ್ಷಣೆ ಮಾಡಲಾಗಿದೆ. ಇವರು ತುಮಕೂರು ನಗರದ ಎಸ್‌ಐಟಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.

ಭಾನುವಾರ ಗೆಳತಿಯರ ಜೊತೆ ಮಂದಾರಗಿರಿ ಬೆಟ್ಟದ ವೀಕ್ಷಣೆಗೆ ತೆರಳಿದ್ದ ಹಂಸ, ಸಮೀಪದ ಮೈದಾಳ ಕೆರೆ ಕೋಡಿ ಬಳಿ ಹೋಗಿದ್ದರು. ಅಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾದಾಗ ಕಾಲು ಜಾರಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು.

“>

 

ಈ ಬಗ್ಗೆ ಸುದ್ದಿ ತಿಳಿದ ಕೂಡಲೇ ಕ್ಯಾತ್ಸಂದ್ರ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಂಸ ಅವರಿಗಾಗಿ ಹುಡುಕಾಟ ನಡೆಸಿದ್ದರು. ಇಂದು ಬೆಳಿಗ್ಗೆ ಮತ್ತೆ ರಕ್ಷಣಾ ಕಾರ್ಯವನ್ನು ಮುಂದುವರೆಸಿದ್ದರು. ಈ ವೇಳೆ ಬಂಡೆ ಕಲ್ಲುಗಳ ನಡುವೆ ಹಂಸ ಅವರು ಸಿಲುಕಿಕೊಂಡಿರುವುದು ಕಂಡು ಬಂದಿದೆ. ಅವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ತುಮಕೂರು ಎಸ್ಪಿ “ತುಮಕೂರು ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯ ಮೈದಾಳ ಕೆರೆಯ ಬಳಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಹರಿಯುವ ನೀರಿನ ಬಂಡೆಗಳ ಮಧ್ಯೆ ಸಿಲುಕಿದ್ದು, ನಮ್ಮ ಮತ್ತು ಅಗ್ನಿಶಾಮಕ ಇಲಾಖೆಯ ಸತತ 12 ಗಂಟೆಗಳ ಕಾರ್ಯಾಚರಣೆಯ ನಂತರ ವಿದ್ಯಾರ್ಥಿನಿಯನ್ನು ರಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!