Monday, October 21, 2024

ಪ್ರಾಯೋಗಿಕ ಆವೃತ್ತಿ

ಮತದಾರರ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಸಂಖ್ಯೆ ಜೋಡಣೆ ಮಾಡಿ

ಜಿಲ್ಲೆಯಲ್ಲಿ 14 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದು, ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯನ್ನು ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಎಲ್.ನಾಗರಾಜು ತಿಳಿಸಿದರು.

ಮಂಡ್ಯದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮತದಾರದ ಗುರುತಿನ ಚೀಟಿ ಸಂಖ್ಯೆಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡುವ ಕುರಿತು ನಡೆದ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಕಚೇರಿಯ ಸಿಬ್ಬಂದಿಗಳು ತಮ್ಮ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡಿಸಿಕೊಳ್ಳಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಫಲಾನುಭವಿಗಳಿಗೆ ಆಧಾರ್ ಜೋಡಣೆ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರ್ ಗಳು,
ಕಾರ್ಯನಿರ್ವಾಹಕ ಅಧಿಕಾರಿಗಳ ಹಂತದಲ್ಲಿ ಸಭೆಯನ್ನು ನಡೆಸಿ ಚುನಾವಣೆ ಗುರುತಿನ ಚೀಟಿಗೆ ಆಧಾರ್ ಕಾರ್ಡ್ ಜೋಡಣೆ ಕುರಿತು ಮಾಹಿತಿ ನೀಡಿ ವರದಿ ಸಲ್ಲಿಸಬೇಕು ಎಂದರು.

ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಕುರಿತು ಮಾಹಿತಿ ನೀಡಿ ವಿದ್ಯಾರ್ಥಿಗಳು ಹಾಗೂ ಅವರ ಮನೆಗಳಲ್ಲೂ ಸಹ ಆಧಾರ್ ಕಾರ್ಡ್ ಜೋಡಣೆ ಮಾಡುವಂತೆ ತಿಳಿಸಬೇಕು ಎಂದರು.

ಆಂದೋಲನ ನಡೆಸಿ

ಜಿಲ್ಲೆಯಲ್ಲಿನ ನ್ಯಾಯಬೆಲೆ ಅಂಗಡಿಗಳಲ್ಲಿ ಬರುವಂತಹ ಪಡಿತರ ಚೀಟಿದಾರರು, ಮಹಿಳಾ ಸಂಘಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸಾರ್ವಜನಿಕರಿಗೆ ಹಾಗೂ ಕಾಲೇಜಿನ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಗರುಡಾ ಆ್ಯಪ್, ವಾಟರ್ ಹೆಲ್ಪ್ ಲೈನ್ ಆ್ಯಪ್ ಗಳ ಬಗ್ಗೆ ಮಾಹಿತಿ ನೀಡಿ ಮೊಬೈಲ್ ನಲ್ಲಿ ಸುಲಭವಾಗಿ ಜೋಡಣೆ ಕೆಲಸ ಮಾಡಬಹುದು ಎಂದರು.

ಆ್ಯಪ್ ಬಳಸಲು ಬರುವುದಿಲ್ಲ ಎಂದರೆ ಬಿ.ಎಲ್.ಒ ಗಳಿಗೆ ಆಧಾರ್ ಸಂಖ್ಯೆ ಜೋಡಣೆಗೆ ಒಪ್ಪಿಗೆ ಪತ್ರ ನೀಡಿದರೆ ಅವರು ಜೋಡಣೆ ಮಾಡಿಕೊಡುತ್ತಾರೆ. ಇಲಾಖೆಗಳು ಈ ಕುರಿತಂತೆ ಗುರಿ ನಿಗದಿಪಡಿಸಿಕೊಂಡು ಉತ್ತಮ‌ ಸಾಧನೆ ಮಾಡುವಂತೆ ತಿಳಿಸಿದರು.

ಸಭೆಯಲ್ಲಿ ಮಂಡ್ಯ ವಿ.ವಿ ಕುಲಪತಿ ಡಾ.ನಾಗರಾಜ್ ಜಿ ಚೊಳ್ಳಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ,ಜಿ. ಪಂ. ಉಪ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ಕುಂಇ ಅಹಮದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಮ ಮೂರ್ತಿ, ಜಿಲ್ಲಾಧಿಕಾರಿಗಳ ಕಚೇರಿಯ ಹಿರಿಯ ಸಹಾಯಕರಾದ ಸ್ವಾಮಿಗೌಡ, , ಜಿಲ್ಲಾ ವಾರ್ತಾಧಿಕಾರಿ ಎಸ್ .ಹೆಚ್. ನಿರ್ಮಲ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!