ಮಳವಳ್ಳಿ ತಾಲ್ಲೂಕಿನ ರಾಮಂದೂರು ಎಂ.ಕಾಗೆಪುರ, ವೀರರಾಜಪುರ, ಬಂಡೂರು ಗ್ರಾಮಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ಅವರು ಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದರು.
ಮತದಾನದ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಿಸುವ ಮೂಲಕ ಮತದಾನದ ಪಾವಿತ್ರ್ಯತೆ ಎತ್ತಿಹಿಡಿಯಬೇಕು ಎಂದರು.
ಬಂಡೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಹಾಗೂ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡಿದರು.
ಚಿಕ್ಕಮೂಲಗೂಡು ಗ್ರಾಮದ ಶಾಲೆಯ ಮತಗಟ್ಟೆಯನ್ನು ವೀಕ್ಷಿಸುವ ಸಂದರ್ಭದಲ್ಲಿ ಶಾಲೆಯ ಸ್ಥಿತಿಗತಿ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಉಪ ವಿಭಾಗಾಧಿಕಾರಿ ಕೀರ್ತನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.




