Sunday, November 22, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು | ಜೆಡಿಎಸ್ ಬೆಂಬಲಿತರ ತೆಕ್ಕೆಗೆ ಅಬಲವಾಡಿ ಗ್ರಾ.ಪಂ.

ವರದಿ: ಪ್ರಭು ವಿ ಎಸ್

ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಅಬಲವಾಡಿ ಗ್ರಾ.ಪಂ. ಗೆ ನೂತನ ಅಧ್ಯಕ್ಷರಾಗಿ ಜೆ.ಡಿ.ಎಸ್ ಬೆಂಬಲಿತ ಅಭ್ಯರ್ಥಿ ಆರ್.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹಿಂದಿನ ಅಧ್ಯಕ್ಷೆ ಬಿ.ಎಂ.ಪವಿತ್ರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ನಿಗದಿಯಾಗಿದ್ದ ಚುನಾವಣೆ ವೇಳೆ ಸುರೇಶ್ ಅವರನ್ನು ಹೊರತುಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಚುನಾವಣಾ ಧಿಕಾರಿ ತಾ.ಪಂ. ಒ.ಓ ರಾಮಲಿಂಗಯ್ಯ ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸುರೇಶ್ ಅವರನ್ನು ಸ್ಥಳೀಯ ಗ್ರಾ.ಪಂ ಸದಸ್ಯರು ಸೇರಿದಂತೆ ಮುಖಂಡರು ಅಭಿನಂದಿಸಿ ಗೌರವಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ನೂತನ ಅಧ್ಯಕ್ಷ ಆರ್.ಸುರೇಶ್, ತಮ್ಮನ್ನು ಅಧ್ಯಕ್ಷರನ್ನಾಗಿಸಲು ಶ್ರಮಿಸಿದ ಸ್ಥಳೀಯ ಮುಖಂಡರು ಹಾಗೂ ಗ್ರಾ.ಪಂ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಲಿದ್ದು, ತಮ್ಮ ಅಧಿಕಾರದ ಅವಧಿಯಲ್ಲಿ ಶ್ರದ್ಧೆ ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ ಚ್ಯುತಿ ಬಾರದಂತೆ ಅಧಿಕಾರ ನಡೆಸುವುದಾಗಿ ಹೇಳಿದರು.

ಅಬಲವಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವಾರು ಸಮಸ್ಯೆಗಳಿದ್ದು ಪ್ರತಿ ಗ್ರಾಮಗಳಿಗೂ ಅಧಿಕಾರಿಗಳೊಟ್ಟಿಗೆ ಭೇಟಿ ನೀಡಿ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸುವ ಜತೆಗೆ ನೆನೆಗುದಿಗೆ ಬಿದ್ದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಿ ಮಾದರಿ ಗ್ರಾಮ ಪಂಚಾಯಿತಿಯನ್ನಾಗಿಸುವುದಾಗಿ ಹೇಳಿದರು.

ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ತೊಡಕುಂಟಾಗದಂತೆ ಸೇವಕನಾಗಿ ಕರ್ತವ್ಯ ನಿರ್ವಹಿಸಿ ಎಲ್ಲಾ ವರ್ಗದ ಜನರ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಲಿದ್ದು ನರೇಗಾ ಯೋಜನೆಯಡಿ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ರಸ್ತೆ, ಚರಂಡಿ ಇನ್ನಿತರ ಕಾಮಗಾರಿಗಳನ್ನು ವೇಗ ಕಲ್ಪಿಸುವುದಾಗಿ ತಿಳಿಸಿದರು.

ಈ ವೇಳೆ ಗ್ರಾ.ಪಂ. ಉಪಾಧ್ಯಕ್ಷೆ ಚುಂಚಮ್ಮ, ಸದಸ್ಯರಾದ ಸತೀಶ್, ನರಸಿಂಹಚಾರ್, ಪುಷ್ಪಾವತಿ, ಸಾಗರ್, ದೇವರಾಜು, ಪುಷ್ಪ, ಮುಖಂಡರಾದ ರವೀಂದ್ರ, ವೀರಣ್ಣ, ರಾಮಯ್ಯ, ತಿಮ್ಮೇಶ್, ವೆಂಕಟೇಶ್, ಅಬಲವಾಡಿ ಅನಿಲ್‌ಕುಮಾರ್ ಇತರರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ