Saturday, July 13, 2024

ಪ್ರಾಯೋಗಿಕ ಆವೃತ್ತಿ

ಜನಸಂಖ್ಯೆ ನಿಯಂತ್ರಣದ ಬಗ್ಗೆ ಅರಿವಿರಲಿ: ಡಾ.ಧನಂಜಯ

ಜನಸಂಖ್ಯೆ ನಿಯಂತ್ರಣದ ಅರಿವು ಪ್ರತಿಯೊಬ್ಬರಿಗೂ ಅವಶ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಧನಂಜಯ ಹೇಳಿದರು.

ಮಂಡ್ಯ ನಗರದಲ್ಲಿರುವ ಡಿ.ಎಚ್.ಓ ಕಚೇರಿ ಬಳಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಸಂಚಾರ ರಥ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನಸಂಖ್ಯೆ ಹೆಚ್ಚಳದಿಂದ ಅನೇಕ ಸಮಸ್ಯೆಗಳು ಉಲ್ಬಣಗೊಳ್ಳುತ್ತಿವೆ. ಭಾರತ ದೇಶದಲ್ಲಿ 130 ಕೋಟಿಗೂ ಹೆಚ್ಚು ಜನಸಂಖ್ಯೆಇದೆ. ಚೀನಾದೇಶವನ್ನು ಹಿಂದಿಕ್ಕುವಷ್ಟು ತೀವ್ರಗತಿಯಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದೆ.ಅದರ ನಿಯಂತ್ರಣದ ಅರಿವು ಮತ್ತು ಸಂತಾನಹರಣ ಚಿಕಿತ್ಸೆ ಅಗತ್ಯವಿದೆ ಎಂದು ತಿಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಕೆ.ಆರ್.ಶಶಿಧರ್ ಅವರು, ಬಡತನ, ಅಜ್ಞಾನ, ಮಾಹಿತಿ ಕೊರತೆ, ಮೂಢನಂಬಿಕೆಗಳು, ಬಾಲ್ಯವಿವಾಹ, ಕಡಿಮೆ ಸಾಕ್ಷರತೆ ಜನಸಂಖ್ಯೆಯ ಹೆಚ್ಚಳಕ್ಕೆ ಮೂಲ ಕಾರಣವಾಗಿದೆ ಎಂದರು.

ನಿಯಂತ್ರಣಕ್ಕಾಗಿ ಸೂಕ್ತ ವಯಸ್ಸಿಗೆ ಮದುವೆ, ಒಂದು ಮಗು ಪಡೆಯುವುದು, ಕುಟುಂಬ ಕಲ್ಯಾಣ ವಿಧಾನ ಮತ್ತು ಚಿಕ್ಕ ಕುಟುಂಬವನ್ನು ರೂಪಿಸುವುದು, ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡುವುದು ಸೇರಿದಂತೆ ಹಲವು ಕ್ರಮಕೈಗೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯಾಧಿಕಾರಿ ರವೀಂದ್ರ, ದಂತ ಆರೋಗ್ಯಾಧಿಕಾರಿ ಚಂದ್ರಶೇಖರ್,ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮರಿಸ್ವಾಮಿ, ದಂತ ಆರೋಗ್ಯಾಧಿಕಾರಿ ಡಾ.ಅರುಣಾನಂದ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!