Wednesday, September 18, 2024

ಪ್ರಾಯೋಗಿಕ ಆವೃತ್ತಿ

ಮಕ್ಕಳಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಬೇಕು: ಡಾ: ಕೆ.ಸಿ ನಾರಾಯಣಗೌಡ

ವಿದ್ಯಾರ್ಥಿಗಳು ಇಂದು ಶಾಲೆಯಿಂದ ಬಂದ ತಕ್ಷಣ ಮೊಬೈಲ್ ಹಿಡಿದು ಕುಳಿತುಕೊಳ್ಳುತ್ತಾರೆ. ಪಠ್ಯ ಚಟುವಟಿಕೆಗಳ ಜೊತೆ ಕ್ರೀಡೆಯ ಬಗ್ಗೆ ಮಕ್ಕಳಲ್ಲಿ ಹೆಚ್ಚು ಆಸಕ್ತಿ ಬೆಳೆಸಬೇಕು ಎಂದು ರೇಷ್ಮೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಚಿವ ಡಾ: ಕೆ.ಸಿ ನಾರಾಯಣಗೌಡ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲೆಯಲ್ಲಿರುವ ಯುವ ರಾಜ್ಯ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ಜೊತೆ ಸಭೆ ನಡೆಸಿ ಮಾತನಾಡಿದರು.

ಗ್ರಾಮ ಮಟ್ಟದಲ್ಲಿ ಕ್ರೀಡಾಂಗಣ
ಪಂಚಾಯಿತಿ ಮಟ್ಟದಲ್ಲಿ‌ ಮಾತ್ರವಲ್ಲದೇ ಗ್ರಾಮ ಮಟ್ಟದಲ್ಲೂ ಕ್ರೀಡಾಂಗಣ ನಿರ್ಮಿಸಲು 504 ಕೋಟಿ ರೂ ಹಣವನ್ನು ಸಹ ಮೀಸಲಿಡಲಾಗಿದೆ ಎಂದರು.

ಯುವ ಪ್ರಶಸ್ತಿ ಪುರಸ್ಕೃತರ ಬೇಡಿಕೆಗಳು ಹಾಗೂ ಸಲಹೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಯುವ ಪ್ರಶಸ್ತಿ ಪುರಸ್ಕೃತರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಸಭೆಯಲ್ಲಿ‌ ನಗರಸಭೆ ಅಧ್ಯಕ್ಷ ಮಂಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ‌ ಅಧಿಕಾರಿ ಶಾಂತ ಎಲ್ ಹುಲ್ಮನಿ, ಅಪರ ಜಿಲ್ಲಾಧಿಕಾರಿ ಡಾ: ಎಚ್ ಎಲ್ ನಾಗರಾಜು‌ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!