Thursday, September 19, 2024

ಪ್ರಾಯೋಗಿಕ ಆವೃತ್ತಿ

ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಮಂಡ್ಯ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ತರಗತಿ ಬಹಿಷ್ಕರಿಸಿ ಮುಷ್ಕರ ನಡೆಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಸುಗಮ ತರಗತಿಗಳನ್ನು ನಡೆಯಲು ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿಗಳು ಮಂಡ್ಯನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನಾ ಮೆರವಣಿಗೆ ಹೊರಟ ವಿದ್ಯಾರ್ಥಿಗಳು,  ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು. ಕೆಲವು ದಿನಗಳಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆಯದೆ ವಿದ್ಯಾರ್ಥಿಗಳ ಪಠ್ಯ ಚಟುವಟಿಕೆಗೆ ಹಿನ್ನಡೆ ಆಗುತ್ತಿದೆ, ಆದ್ದರಿಂದ ಕೂಡಲೇ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರು ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸಿ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ತರಗತಿ ಬಹಿಷ್ಕಾರವನ್ನು ಹಿಂಪಡೆದು ಪಾಠ ಪ್ರವಚನ ಆರಂಭಿಸಬೇಕು. ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಜತೆಗೆ ಮಾತುಕತೆ ನಡೆಸಿ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಶೀಲಿಸಿ, ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುಷ್ಕರ ಕೊನೆಗೊಳಿಸಲು ಮನವೊಲಿಸಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ವಿದ್ಯಾರ್ಥಿ ಮುಖಂಡರಾದ ಚಂದು, ಸುಗುಣ, ನೀತಂ, ನವ್ಯಶ್ರೀ, ಹರ್ಷ ನೇತೃತ್ವ ವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!