Tuesday, September 17, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ | ನೂತನ ಜಿಲ್ಲಾಧಿಕಾರಿಯಾಗಿ ಡಾ.ಕುಮಾರ್ ಅಧಿಕಾರ ಸ್ವೀಕಾರ

ಮಂಡ್ಯ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕುಮಾರ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು.

ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಹೆಚ್ಎನ್ ಗೋಪಾಲಕೃಷ್ಣ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಕುಮಾರ್ ಅವರನ್ನು ಸರ್ಕಾರ ಮಂಡ್ಯ ಜಿಲ್ಲಾಧಿಕಾರಿಯನ್ನಾಗಿ ನಿಯೋಜಿಸಿ ಆದೇಶಿಸಿತ್ತು.

ಈ ಹಿಂದೆ ಉಡುಪಿ, ಮಂಗಳೂರು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ‌ ಅಪರ ಜಿಲ್ಲಾಧಿಕಾರಿಯಾಗಿ, ವಿಜಯಪುರ, ತುಮಕೂರು ಜಿಲ್ಲೆಯಲ್ಲಿ ಉಪವಿಭಾಗಾಧಿಕಾರಿಯಾಗಿ ಕಂದಾಯ ಇಲಾಖೆಯಲ್ಲಿ ಹೆಚ್ಚಿನ‌ ಸೇವೆ ಸಲ್ಲಿಸಿದ್ದೇನೆ. ಕಂದಾಯ ಇಲಾಖೆಯಲ್ಲಿ ಯಾವುದೇ ತೊಂದರೆ ಇದ್ದರೂ ಪರಿಶೀಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತೇನೆ. ಪಾರದರ್ಶಕ ಹಾಗೂ ಪ್ರತಿ ಸ್ಪಂದನಾತ್ಮಕ ಆಡಳಿತವನ್ನು ನೀಡುವುದು ಮುಖ್ಯ ಗುರಿ ಎಂದರು.

ಕಂದಾಯ ಇಲಾಖೆಯಲ್ಲಿ 15 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ಹಾಗಾಗಿ ಜಿಲ್ಲಾಧಿಕಾರಿ ಕಛೇರಿ ಹಾಗೂ ಕಂದಾಯ ಇಲಾಖೆ ಯಾವುದೇ ಸಮಸ್ಯೆ ಇದ್ದಲ್ಲಿ ಪರೀಶಿಲನೆ ನಡೆಸಿ ಸಕರಾತ್ಮಕವಾಗಿ ಸ್ಪಂದಿಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪುವ ನಿಟ್ಟಿನಲ್ಲಿ ಕೆಲಸ ಮಾಡುವೆ. ಪಾರದರ್ಶಕವಾಗಿ ಆಡಳಿತ ನಡೆಸಿ ಸಾರ್ವಜನಿಕರಿಗೆ ಬಹುಬೇಗ ಆಡಳಿತ ಸೇವೆ ತಲುಪಿಸುವುದು. ಈ ಮೂಲಕ ಕಡತ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತೇನೆ ಎಂದರು.

nudikarnataka.com

ಅಧಿಕಾರ ಎಂಬುದು ಸಾರ್ವಜನಿಕರ ಸೇವೆ ಮಾಡಲು ಸಿಕ್ಕಿರುವ ಅವಕಾಶ. ರೈತರಿಗೆ ಭೂಮಿ ತಂತ್ರಾಂಶ ಸೇರಿದಂತೆ ಸರ್ಕಾರದ ಎಲ್ಲಾ ಯೋಜನೆಗಳ ಬಗ್ಗೆ ಅರಿವು‌ ಮೂಡಿಸಿ ಕಲಾಮಿತಿಯೊಳಗೆ ಯೋಜನೆಗಳನ್ನು ಅನುಷ್ಠಾನ ಮಾಡಲಾಗುವುದು ಎಂದರು

ಕೃಷಿಕರ ಸಮಸ್ಯೆಗಳನ್ನು ಆದ್ಯತೆ ನೀಡಿ ಪರಿಹರಿಸಲಾಗುವುದು. ಮಳೆಯ ಕೊರತೆ ಉಂಟಾದಲ್ಲಿ ಉಂಟಾಗಬಹುದಾದ ತೊಂದರೆ ಹಾಗೂ ಪರಿಹಾರ ಕ್ರಮಗಳ ಬಗ್ಗೆ ಕೂಡಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದರು.

ಸ್ವಾಗತ

ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿಕೊಂಡ ಡಾ. ಕುಮಾರ್ ಅವರಿಗೆ ಮಂಡ್ಯ ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಉಪಾಧ್ಯಕ್ಷೆ ಮೀರಾ ಶಿವಲಿಂಗಯ್ಯ ರವರು ಹೂಗುಚ್ಚ ನೀಡಿ ಸ್ವಾಗತಿಸಿದರು.

ಪತ್ರಕರ್ತರಿಂದ ಸ್ವಾಗತ

ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ.ಕುಮಾರ್ ಅವರಿಗೆ ಹೂಗುಚ್ವ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ  ಕುಮಾರ್ ಅವರು ಮಾತನಾಡಿ, ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಪತ್ರಕರ್ತರ ಸಹಕಾರ ಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಮತ್ತೀಕೆರೆ ಜಯರಾಮ್, ಕೆ.ಸಿ.ಮಂಜುನಾಥ್, ಶ್ರೀನಿವಾಸ್, ಬಿ.ಪಿ.ಪ್ರಕಾಶ್, ಚಿಕ್ಕಮಂಡ್ಯ ನವೀನ್, ಮಂಜುನಾಥ್, ಕೆ.ಎನ್.ನವೀನ ಕುಮಾರ್, ನಂಜುಂಡಸ್ವಾಮಿ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!