ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ ಯನ್ನ ಲೋಕಸಭೆಯಲ್ಲಿ ಮಂಡಿಸಿ ಜಾರಿಗೆ ತರಲು ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರ ಮುಂದಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷದ ಮಹಿಳಾ ಮೋರ್ಚಾ ಕಾರ್ಯಕರ್ತರು ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ನಗರದಲ್ಲಿರು ಬಿಜೆಪಿ ಕಚೇರಿ ಬಳಿ ಸಾರ್ವಜನಿಕರಿಗೆ ಸಿಹಿ ವಿತರಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಮತ್ತು ಸರ್ಕಾರದ ಪರ ಘೋಷಣೆಗಳನ್ನು ಕೂಗಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷೆ ಯಶೋದಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರ ಮಹಿಳಾ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಟ್ಟ ಬಿಜೆಪಿ ಪಕ್ಷಕ್ಕೆ ಮಹಿಳೆಯರ ಸದಾಕಾಲ ಚಿರಋಣಿ ಯಾಗಿರುವಂತೆ ಸಾಧನೆ ಮಾಡಿದ್ದಾರೆ ಎಂದರು.
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. ೩೩ ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡನೆಯಾಗಿದೆ, ರಾಜ್ಯ ಸಭೆಯಲ್ಲಿ ಅನುಪತಿ ಪಡೆದು ಜಾರಿ ಮಾಡಿದರೆ ಸಾಕಷ್ಟು ಮಹಿಳೆಯರು ನಾರಿಶಕ್ತಿಯೋಜನೆಯ ಫಲಾನುಭವಿಗಳಾಗಿ ರಾಜಕೀಯ ಬಲವನ್ನು ಹೆಚ್ಚಿಸಿಕೊಳ್ಳಲಿದ್ದಾರೆ ಎಂದು ನುಡಿದರು.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾದ ಮದ್ದೂರು ತಾಲೂಕು ಅಧ್ಯಕ್ಷೆ ಶ್ವೇತಾಶ್ರೀ, ಶ್ರೀರಂಗಪಟ್ಟಣ ಅಧ್ಯಕ್ಷೆ ಕೆ ಎಂ ಶಾರದಾ, ದೇವಿರಮ್ಮ, ಮಂಜುಳಾ, ವಿಜಯ ಕುಮಾರಿ, ಪುಟ್ಟಮ್ಮ, ತಾಯಮ್ಮ ಸೌಮ್ಯ, ರಂಜಿತಾ ಸುಕನ್ಯಾ, ಶಕುಂತಲಾ, ಲಕ್ಷ್ಮಿ, ಪದ್ಮಾವತಿ ಸುಧಾಮಣಿ ಇತರರಿದ್ದರು.




