Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾರು – ಬುಲೋರೋ ಮುಖಾಮುಖಿ ಡಿಕ್ಕಿ : ಸ್ಥಳದಲ್ಲಿಯೇ ಇಬ್ಬರ ಸಾವು ; 20ಕ್ಕೂ ಹೆಚ್ಚು ಮಂದಿ ಗಾಯ

ಕಾರು ಮತ್ತು ಬುಲೋರೋ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಳವಳ್ಳಿ ತಾಲ್ಲೂಕಿನ ದಾಸನದೊಡ್ಡಿಯಲ್ಲಿ ನಡೆದಿದೆ.

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಸಮೀಪದ ಜಾಗೇರಿ ಗ್ರಾಮದ ಮಾದಲಿಯಮ್ಮ(60) ಜೋ ಶೇಫ್ ಮೇರಿ(52) ಎಂಬುವವರು ಮೃತರಾಗಿದ್ದು, ಐದು ಮಂದಿಗೆ ತೀವ್ರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಮಂಡ್ಯ ಮೈಸೂರು ಆಸ್ಪತ್ರೆಗೆ ಸೇರಿಸಲಾಗಿದೆ. ಸಣ್ಣಪುಟ್ಟ ಗಾಯಗೊಂಡ 20ಕ್ಕೂ ಹೆಚ್ಚು ಮಂದಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಮದ್ದೂರು ತಾಲ್ಲೂಕಿನ ಕೆ.ಪಿ.ದೊಡ್ಡಿ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಬುಲೋರೋದಲ್ಲಿ ಶಿವನಸಮುದ್ರ ಮಾರಮ್ಮ ದೇವಸ್ಥಾನದಲ್ಲಿ ಊಟ ಮುಗಿಸಿ ತಮ್ಮ ಸ್ವಗ್ರಾಮಕ್ಕೆ ಬರುತ್ತಿದ್ದಾಗ ಎದುರಿನಿಂದ ಬಂದ ಕಾರು ಮುಖಾ ಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೇ ಐದು ಮಂದಿಯ ಸ್ಥಿತಿ ಚಿಂತಜನಕವಾಗಿದೆ.

ಅಪಘಾತ ಸಂಭವಿಸಿದ ತಕ್ಷಣವೇ ಪೊಲೀಸರು ಸ್ಥಳೀಯರ ಸಹಾಯದಿಂದ ಗಾಯಾಳುಗಳನ್ನು  ತುರ್ತು ಚಿಕಿತ್ಸಾ ವಾಹನದ ಮೂಲಕ ಮಳವಳ್ಳಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿದ ನಂತರ ಗಾಯಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮತ್ತು ಮೈಸೂರು ಆಸ್ಪತ್ರೆಗೆ ಕಳುಹಿಸಲಾಯಿತು.

ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿವೈಎಸ್‌ಪಿ ನವೀನ್‌ ಕುಮಾರ್, ಶಾಸಕ ಡಾ.ಕೆ.ಅನ್ನದಾನಿ, ಮಾಜಿ ಸಚಿವ ಪಿ.ಎಂ ನರೇಂದ್ರಸ್ವಾಮಿ ಆಸ್ಪತ್ರೆಗೆ ಬೇಟಿ ನೀಡಿ ಗಾಯಾಳುಗಳಿಗೆ ಆತ್ಮಸ್ಥೈರ್ಯ ತುಂಬಿ, ಮೃತ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!