ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಲಾರಿ ಹಿಂಬದಿಗೆ ಬೈಕ್ ಸವಾರ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೊಗರಹಳ್ಳಿ ಮಂಟಿ ಬಳಿ ನಡೆದಿದೆ.
ತಾಲ್ಲೂಕಿನ ಬಾಬುರಾಯನಕೊಪ್ಪಲು ಗ್ರಾಮದ ಚೆಲುವರಾಜು ಎಂಬುವರ ಮಗ (30) ವರ್ಷದ ರಿತೀಶ್ ಕುಮಾರ್ ಮೃತಪಟ್ಟ ಯುವಕ.
ಈತ ಮೈಸೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಕೆಲಸಕ್ಕೆ ತೆರಳುವ ಮಾರ್ಗ ಮಧ್ಯೆ ಮೊಗರಹಳ್ಳಿ ಮಂಟಿ ಬಳಿ ಈ ಅಪಘಾತ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.
ಈ ಕುರಿತು ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




