ಯಾವುದೇ ಕೆಲಸ ಮಾಡುವಾಗ ಒಂದು ಗುರಿ ಇಟ್ಟು ಸಮಯಕ್ಕೆ ಸರಿಯಾಗಿ, ವಿಳಂಬವಾಗದಂತೆ ಕಾರ್ಯನಿರ್ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್.ಜೆ ದಿವ್ಯಾಪ್ರಭು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್‌ನ ಕಾವೇರಿ ಸಭಾಂಗಣದಲ್ಲಿ ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರ ನೀಡುವಂತಹ ಅನುದಾನ ಸದುಪಯೋಗ ಮಾಡಿಕೊಂಡು ಇಲಾಖೆಯಲ್ಲಿ ಗುಣಮಟ್ಟದ ಕಾಮಗಾರಿಗಳ ಬಗ್ಗೆ ಕಾಳಜಿವಹಿಸಿ.ಮಾರ್ಚ್ ಅಂತ್ಯದ ಕಾರ್ಯಗಳು ಪೂರ್ಣಗೊಂಡಿಲ್ಲದ ಇಲಾಖಾ ಅಧಿಕಾರಿಗಳು ಗಮನಹರಿಸಿ ಪೂರ್ಣಗೊಳಿಸಬೇಕು ಎಂದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಯಾದ ಜಲ ಜೀವನ್ ಮಿಷನ್ ನಲ್ಲಿ ಸಾರ್ವಜನಿಕರಿಗೆ ಬೇಕಾದ ಸೌಲಭ್ಯವನ್ನು ಯಾವುದೇ ವಿಳಂಬವಿಲ್ಲದೆ ಸಕಾಲಕ್ಕೆ ಒದಗಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿ.ಪಂ.ನ ಉಪ ಕಾರ್ಯದರ್ಶಿ ಸರಸ್ವತಿ, ಯೋಜನಾಧಿಕಾರಿ ಪ್ರಭುಸ್ವಾಮಿ, ಐ.ಎಫ್.ಎಸ್ ಅಧಿಕಾರಿ ಪಿ.ಋತ್ರೆನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.