Thursday, October 24, 2024

ಪ್ರಾಯೋಗಿಕ ಆವೃತ್ತಿ

ಪಾಂಡವಪುರ| ನ್ಯಾಯಬೆಲೆ ಅಂಗಡಿ ಕಾರ್ಯದರ್ಶಿ ವಿರುದ್ದ ಕ್ರಮಕ್ಕೆ ಸೂಚನೆ

ಪಾಂಡವಪುರದ ದೊಡ್ಡಬ್ಯಾಡರಳ್ಳಿ ನ್ಯಾಯಬೆಲೆ ಅಂಗಡಿ ಪರಿಶೀಲನೆಯ ವೇಳೆ 6 ಕ್ವಿಂಟಲ್ ಅಕ್ಕಿ ಹಾಗೂ 6.5 ಕ್ವಿಂಟಲ್ ರಾಗಿ ತೂಕದಲ್ಲಿ ವ್ಯತ್ಯಾಸ ಕಂಡುಬಂದಿರುತ್ತದೆ. ಸ್ಥಳೀಯ ಗ್ರಾಹಕರಿಂದ ಬ್ಯಾಡರಹಳ್ಳಿ ನ್ಯಾಯಬೆಲೆ ಅಂಗಡಿಯ ಕಾರ್ಯದರ್ಶಿಗಳ ವಿರುದ್ಧ ದೂರುಗಳಿದ್ದು, ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್ ಕೃಷ್ಣ ತಿಳಿಸಿದರು.

ಇಂದು ವಿವಿಧ ಸ್ಥಳಗಳ ಪರಿಶೀಲನೆಯ ನಂತರ ಮಾತನಾಡಿ, ಶ್ರೀರಂಗಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಭೇಟಿ ನೀಡಿ ಪರಿಶೀಲಿಸಲಾಯಿತು. ಶೌಚಾಲಯದಲ್ಲಿ ಸ್ವಚ್ಚತೆಯ ಕೊರತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸುವಂತೆ ಶ್ರೀರಂಗಪಟ್ಟಣ ತಹಶೀಲ್ದಾರ್ ಅವರಿಗೆ ಸೂಚನೆ ನೀಡಿದರು.

ಶ್ರೀರಂಗಪಟ್ಟಣ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 250 ಮಕ್ಕಳಿಗೆ ದಾಖಲಾತಿಯ ವ್ಯವಸ್ಥೆ ‌ಇದ್ದು, 190 ಮಕ್ಕಳ ಹಾಜರಾತಿ ಇದ್ದು, ವಿದ್ಯಾರ್ಥಿಗಳಿಂದ ಉತ್ತಮ ವ್ಯವಸ್ಥೆ ಇರುವುದಾಗಿ ಅಭಿಪ್ರಾಯ ವ್ಯಕ್ತಪಡಿಸಿದರು. ಆದರೆ ಮಕ್ಕಳಿಗೆ ಹಾಸಿಗೆಯ ಕೊರತೆ ಇದ್ದು, ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸರ್ಕಾರಿ ಆಸ್ಪತ್ರೆ ಭೇಟಿ ನೀಡಿದ್ದು, ಬೇರೆ ಆಸ್ಪತ್ರೆಗೆ ಹೋಲಿಸಿದರೆ ರೋಗಿಗಳಿಗೆ ಉತ್ತಮ ಸೌಲಭ್ಯ ದೊರಕುತ್ತಿದ್ದು, ಸಮಿತಿಯು ಮೆಚ್ಚುಗೆ ವ್ಯಕ್ತ ಪಡಿಸಿತು.

ಶ್ರೀರಂಗಪಟ್ಟಣದ ಮುಸ್ಲಿಂ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲಿಸಲಾಯಿತು. ಇಲ್ಲಿ ಶೌಚಾಲಯದ ವ್ಯವಸ್ಥೆ ಉತ್ತಮಗೊಳಿಸಬೇಕಿದೆ. ಇನ್ನುಳಿದಂತೆ ಅಡುಗೆ ಮನೆ, ಮಕ್ಕಳಿಗೆ ಆಹಾರ ವಿತರಣೆ ತೃಪ್ತಿಕರವಾಗಿದೆ ಎಂದರು.

ಪರಿಶೀಲನೆ ವೇಳೆ ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಆಹಾರ ಆಯೋಗದ ಸದಸ್ಯರಾದ ಲಿಂಗರಾಜು ಕೋಟೆ, ಸುಮಂತ್ ರಾವ್, ಮಾರುತಿ ಎಂ, ದೊಡ್ಡಲಿಂಗಣ್ಣರವರ್, ರೋಹಿಣಿ ಪ್ರಿಯ, ಕೆ. ಎಸ್ ವಿಜಯಲಕ್ಷ್ಮಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!