Friday, November 20, 2026

ಪ್ರಾಯೋಗಿಕ ಆವೃತ್ತಿ

ಚಲುವರಾಯಸ್ವಾಮಿ ವಿರುದ್ದ ದೂರು ಜಾ.ದಳದ ಕುತಂತ್ರ; ‘ಕೈ’ ಕಾರ್ಯಕರ್ತರ ಆಕ್ರೋಶ

ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ನೀಡಿರುವ ಸುಳ್ಳಪತ್ರದ ಹಿಂದೆ ಜಾ.ದಳ ನಾಯಕರ ಕುತಂತ್ರ ಆಡಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಾಗಮಂಗಲ ಪಟ್ಟಣದಲ್ಲಿ ಗುರುವಾರ ಪತ್ರಿಟಭಟನೆ ನಡೆಸಿದರು.

ನಾಗಮಂಗಲ ಪಟ್ಟಣದ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು. ಜಾ.ದಳದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಪ್ರಸನ್ನಮಾತನಾಡಿ, ಜಾ.ದಳ ನಾಯಕರು ವ್ಯವಸ್ಥಿತ ಷಡ್ಯಂತ್ರ ರೂಪಿಸಿ ಸಚಿವರ ಹೆಸರಿಗೆ ಕಳಂಕ ತರಲು, ಭ್ರಷ್ಟಾಚಾರದ ಸುಳ್ಳು ಆರೋಪ ಮಾಡಿದ್ದಾರೆ. ಚಲುವರಾಯಸ್ವಾಮಿಯ ರಾಜಕೀಯ ಏಳಿಗೆ ಸಹಿಸದೆ ಹುನ್ನಾರ ಮಾಡಿದ್ದಾರೆ ಎಂದು ದೂರಿದರು.

ದ್ವೇಷದ ರಾಜಕಾರಣ ಮಾಡುತ್ತಿರುವ ಜೆಡಿಎಸ್ ನಾಯಕರು ಸಚಿವ ಚಲುವರಾಯಸ್ವಾಮಿ ಜನಪ್ರಿಯತೆ ಸಹಿಸದೇ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರ ನಕಲಿ ಸಹಿ ಬಳಸಿ, ಇಲ್ಲಸಲ್ಲದ ಆರೋಪಗಳನ್ನು ಸೃಷ್ಟಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ವ್ಯವಸ್ಥಿತ ಷಡ್ಯಂತ್ರವಾಗಿದ್ದು, ಸಚಿವರಿಗೆ ಮತ್ತು ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದರು ಎಂದು ದೂರಿದರು.

ಚುನಾಯಿತ ಜನಪ್ರತಿನಿಧಿಗಳ ಮೇಲೆ ಅಧಿಕಾರಿಗಳ ಹೆಸರಿನಲ್ಲಿ ನಕಲಿ ದೂರು ಸಲ್ಲಿಸಿ, ಬ್ಲಾಕ್ ಮೇಲ್ ತಂತ್ರ ಬಳಸುವ ಮೂಲಕ ಜನಪ್ರತಿನಿಧಿಗಳನ್ನು ಬೆದರಿಸುವ ತಂತ್ರದ ಹಿಂದೆ ಬಹುದೊಡ್ಡ ಹುನ್ನಾರ ಅಡಗಿದೆ, ಇದರ ಹಿಂದೆ ದೊಡ್ಡ ಜಾಲವೆ ಇದೆ, ಅಂತಹವರನ್ನು ಪತ್ತೆ ಹಚ್ಚಿ ಕ್ರಿಮಿನಲ್ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಡಿವೈಎಸ್ಪಿ ಲಕ್ಷ್ಮೀನಾರಾಯಣ ಅವರಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಜವರೇಗೌಡ, ರಾಜೇಶ್, ಹನುಮಂತು, ತಿಮ್ಮರಾಯಿಗೌಡ, ಎಂ.ಜೆ.ರಾಜೇಶ್ ವಸಂತಮಣಿ, ಹೊನ್ನಳ್ಳಿ ಕೃಷ್ಣೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ