Thursday, June 13, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದ ಸ್ವಾಭಿಮಾನ ಎತ್ತಿ ಹಿಡಿಯಲು ನಟ ದರ್ಶನ್ ಆಗಮನ : ನರೇಂದ್ರಸ್ವಾಮಿ

ಮಂಡ್ಯ ಜಿಲ್ಲೆಯ ಸ್ವಾಭಿಮಾನವನ್ನು ಎಂದಿಗೂ ಕಳೆದುಹೋಗಬಾರದು ಧರ್ಮಯುದ್ದದ ಸಂದರ್ಭದಲ್ಲಿ ಚಿತ್ರ ನಟ ದರ್ಶನ್ ಮಂಡ್ಯ ಜಿಲ್ಲೆಗೆ ಆಗಮಿಸಿ ಉತ್ತಮ ಅಭ್ಯರ್ಥಿಗಳ ಪರವಾಗಿ ನಿಲ್ಲುತ್ತಾ ಬರುತ್ತಿದ್ದಾರೆ, ಅದರಂತೆ ಮಂಡ್ಯ ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಲು ದರ್ಶನ್ ಆಗಮಿಸಿ ಕಾಂಗ್ರೆಸ್ ಅಭ್ಯರ್ಥಿವೆಂಟಕರಮಣ್ಣೇಗೌಡ (ಸ್ಟಾರ್ ಚಂದ್ರು) ಪರ ಮತಯಾಚನೆ ಮಾಡಲು ಬಂದಿದ್ದಾರೆ ಎಂದು ಶಾಸಕ ಪಿಎಂ ನರೇಂದ್ರಸ್ವಾಮಿ ತಿಳಿಸಿದರು.

ಮಳವಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಪರ ಮತಯಾಚಿಸಲು ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು, ಹಲಗೂರಿನಲ್ಲಿ ಪ್ರಚಾರವನ್ನು ಆರಂಭಿಸಿ ತೊರೆಕಾಡನಹಳ್ಳಿ, ಹುಸ್ಕೂರು, ಹಾಡ್ಲಿ, ಬಿಜಿಪುರ, ಬೆಳಕವಾಡಿ,ಕಿರುಗಾವಲು, ತಳಗವಾದಿ, ಕಾಗೇಪುರ ಮಳವಳ್ಳಿ ಸೇರಿದಂತೆ ಇತರೆ ಗ್ರಾಮಗಳಿಗೆ ತೆರಳಿ ಮತ ಯಾಚನೆ ಮಾಡಿದ ನಂತರ ಮಾತನಾಡಿದರು.

ದರ್ಶನ್ ಅಭಿಮಾನಿಗಳು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವುದರ ಮೂಲಕ ಅಭಿಮಾನವನ್ನು ಮೆರೆಯಬೇಕೆಂದು ನರೇಂದ್ರಸ್ವಾಮಿ ಮನವಿ ಮಾಡಿದರು.

ವಿಧಾನಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್‌ಗಾಂಧಿ, ಮಲ್ಲಿಕಾರ್ಜುನಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಒಮ್ಮತದ ತೀರ್ಮಾನದೊಂದಿಗೆ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಟಾರ್ ಚಂದ್ರು ಅವರ ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟಿದ್ದು, ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವುದರ ಮೂಲಕ ಮಂಡ್ಯ ಜಿಲ್ಲೆಯ ಸ್ವಾಭಿಮಾನವನ್ನು ಎತ್ತಿ ಹಿಡಿಯಬೇಕೆಂದು ಕರೆ ನೀಡಿದರು.

ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರು 8 ತಿಂಗಳ ಅವಧಿಯಲ್ಲಿ ಸುಮಾರು 500 ಕೋಟಿಗೂ ಹೆಚ್ಚು ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ದಿಗೊಳಿಸಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ದಿಗೊಳಿಸಲಿದ್ದಾರೆ, ಕಾಂಗ್ರೆಸ್ ಸರ್ಕಾರ ಮಂಡ್ಯ ಜಿಲ್ಲೆಯ ಶಾಶ್ವತ ಕೊಡುಗೆಗಳನ್ನು ನೀಡಿದ್ದಾರೆ, ಜೊತೆಗೆ ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆಂದು ಹೇಳಿದರು.

ಕಾಂಗ್ರೆಸ್ ಅಭ್ಯರ್ಥಿ ವೆಂಟಕರಮಣ್ಣೇಗೌಡರು ದೊಡ್ಡ ಉದ್ಯಮಿಗಳಾಗಿದ್ದು, ಈಗಾಗಲೇ ಐದು ಸಾವಿರಕ್ಕೂ ಹೆಚ್ಚು ಯುವಕರಿಗೆ ಉದ್ಯೋಗ ನೀಡಿದ್ದಾರೆ, ಸೇವೆ ಮಾಡುವ ಹಂಬಲದೊಂದಿಗೆ ರಾಜಕಾರಣಕ್ಕೆ ಆಗಮಿಸಿದ್ದು, ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸಬೇಕೆಂದು ಕೋರಿದರು.

ಅಭಿಮಾನಿಗಳು ದರ್ಶನ್ ಪರ ಘೋಷಣೆಗಳನ್ನು ಕೂಗಿ ಅಭಿಮಾನವನ್ನು ಮೆರೆದರು, ಬೃಹತ್ ಹಾರ ಹಾಕಿ ಅಭಿನಂದನೆ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಶಾಸಕ ಉದಯ್‌, ವಿಧಾನಪರಿಷತ್ ಸದಸ್ಯ ಮಧು ಜಿ. ಮಾದೇಗೌಡ, ಕಾಂಗ್ರೆಸ್ ಮುಖಂಡ ಶಿವಣ್ಣ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!