ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಜೂನ್ 11ರಂದು ಬೆಳಗ್ಗೆ ಮೈಸೂರಿನ ಫಾರ್ಮ್ ಹೌಸ್ನಲ್ಲಿ ನಟ ದರ್ಶನ್ ಅವರನ್ನ ಬಂಧಿಸಲಾಗಿದೆ ಎನ್ನಲಾಗಿದೆ. ದರ್ಶನ್ ಗೆಳತಿ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದನು.
ಈ ಕಾರಣಕ್ಕೆ ನಟ ದರ್ಶನ್ ಸೂಚನೆ ಮೇರೆಗೆ ಅವರ ಗೆಳೆಯರು ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯನ್ನು ಕೊಲೆ ಮಾಡಿದ್ದರು ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ರೇಣುಕಾಸ್ವಾಮಿ ಪೋಷಕರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.