ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಂಡ ಹಿನ್ನೆಲೆಯಲ್ಲಿ ನಟ ದರ್ಶನ್ ನನ್ನು ಪೊಲೀಸರು ಬೆಂಗಳೂರಿನ ಹೊಸಕೆರೆಹಳ್ಳಿ ಬಳಿ ಗುರುವಾರ ಸಂಜೆ ಬಂಧಿಸಿದ್ದಾರೆ.
ತಮಿಳುನಾಡಿನಿಂದ ಬೆಂಗಳೂರಿನ ಬಂದ ದರ್ಶನ್, ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸೇರಿದ ಪ್ಲಾಟ್ ಬಳಿ ಇದ್ದಾಗ ಪೊಲೀಸರು ಬಂಧಿಸಿ ಕರೆದೊಯ್ದಿದ್ಧಾರೆ. ಅವರನ್ನು ಬಳ್ಳಾರಿ ಜೈಲಿಗೆ ರವಾನಿಸುವ ಸಾಧ್ಯತೆ ಇದೆ.
ದರ್ಶನ್ ಬಂಧನಕ್ಕೂ ಮುನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಸುಪ್ರೀಂಕೋರ್ಟ್ ನಲ್ಲಿ ಇಂದು ರದ್ದಾಗುತ್ತಿದ್ದಂತೆ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದಾರೆ.




